ಮಂಗಳೂರು, : ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪ ಸಂಬಂಧ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ. ದೇವರಿಗೆ ಅವಹೇಳನ ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಇಂದು ಪೋಷಕರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಸ್ಥಳಕ್ಕೆ ಆಗಮಿಸಿದ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿಯನ್ನು ಅಮಾನತು ಮಾಡಿದ್ದಾಗಿ ತಿಳಿಸಿದ್ದಾರೆ.
ನಗರದ ಜೆಪ್ಪುನಲ್ಲಿರುವ ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಪ್ರಭಾ ವಿರುದ್ಧ ಧರ್ಮ ನಿಂದನೆಯ ಕಿಚ್ಚು ಜೋರಾಗಿದ್ದು, ಶಾಲೆಯ ಮುಂಭಾಗ ನೂರಾರು ಸಂಖ್ಯೆಯಲ್ಲಿ ಆಕ್ರೋಶಿತರು ಜಮಾವಣೆಗೊಂಡಿದ್ದಾರೆ. ಹಿಂದೂ ವಿದ್ಯಾರ್ಥಿಗಳ ಪೋಷಕರೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಕೂಡ ಆಗಮಿಸಿದ್ದು, ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ. ಈ ವೇಳೆ ಶಾಲೆ ಗೇಟ್ ಮುಂಭಾಗ ಶಾಸಕ ಹಾಗೂ ಪೋಷಕರನ್ನು ಪೊಲೀಸರು ತಡೆದರು.
ಶಾಲೆಯ ಮುಂಭಾಗ ಜಮಾವಣೆಗೊಂಡ ಪೋಷಕರು ಶಿಕ್ಷಕಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಪ್ರತಿಭಟನಾ ನಿರತ ಪೋಷಕರ ಮುಂದೆ ಆಗಮಿಸಿದ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿ ಪ್ರಭಾ ಅವರನ್ನು ಅಮಾನತು ಮಾಡಿದ್ದಾಗಿ ತಿಳಿಸಿದರು.
ಅಧಿಕೃತವಾಗಿ ಲಿಖಿತವಾಗಿ ಶಾಲೆಯ ಲೆಟರ್ ಹೆಡ್ನಲ್ಲಿ ಅಮಾನತ್ತಿನ ಬಗ್ಗೆ ಸ್ಪಷ್ಟನೆ ನೀಡಲಾಗಿದ್ದು, ಮುಂದೆ ಶಿಕ್ಷಣ ಇಲಾಖೆ ಪ್ರಕರಣದ ಆಂತರಿಕ ತನಿಖೆ ನಡೆಸಲಿದೆ. ಶಿಕ್ಷಣ ಇಲಾಖೆ ತನಿಖಾ ವರದಿ ಆಧಾರದ ಮೇಲೆ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ಏನಿದು ಪ್ರಕರಣ?
ಮಂಗಳೂರಿನ ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಅಯೋಧ್ಯೆ ರಾಮಮಂದಿರ ಹಾಗೂ ಪ್ರಭು ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದಾರೆ. ಮಕ್ಕಳಲ್ಲಿ ಶಿಕ್ಷಕಿ ಶಾಲಾ ಮಕ್ಕಳಿಗೆ ಹಿಂದೂ ಧರ್ಮ, ದೇವರ ಬಗ್ಗೆ ಅವಹೇಳನಕಾರಿ ಬೋಧನೆ ಮಾಡಿದ್ದಾರೆ. ಮಕ್ಕಳ ಮನಸ್ಸಿನಲ್ಲಿ ಧರ್ಮ ವಿರೋಧಿ ಭಾವನೆಯನ್ನು ಮೂಡಿಸಲು ಯತ್ನ ಮಾಡಲಾಗಿದ್ದಾರೆ. ಅಲ್ಲದೆ ಅವಹೇಳನದ ವಿರುದ್ಧ ಧ್ವನಿ ಎತ್ತಿ ಪ್ರತಿಭಟಿಸಲು ನಿರ್ಧರಿಸಿದ್ದು, ಎಲ್ಲಾ ಹಿಂದೂ ಸಂಘಟನೆಗಳ ಕಾರ್ಯಕರ್ತರು ಶಾಲಾ ಆವರಣದಲ್ಲಿ ಸೇರುವಂತೆ ಸಂದೇಶ ರವಾಸಿದ ಆಡಿಯೋ ವೈರಲ್ ಆಗಿತ್ತು.
ಅದರಂತೆ, ವಿದ್ಯಾರ್ಥಿಗಳ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಶಾಲಾ ಆವರಣದಲ್ಲಿ ಜಮಾಯಿಸಿ ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದ ಕಾಂಗ್ರೆಸ್ ನಾಯಕ ಐವನ್ ಡಿಸೋಜಾ, ಆಡಳಿತ ಮಂಡಳಿ ಜೊತೆ ಮಾತನಾಡಿ ತೆರಳುವ ವೇಳೆ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಐವನ್ ಡಿಸೋಜಾ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದರು.
ವಿದ್ಯಾರ್ಥಿಗಳಿಗೆ ಹಿಂದೂ ದೇವರ ಮೇಲಿನ ನಂಬಿಕೆ ಹೋಗುವಂತೆ ಕ್ರೈಸ್ತ ಮತವನ್ನು ವೈಭವೀಕರಿಸಿ ಮತಾಂತರಕ್ಕೆ ಪ್ರೇರೇಪಿಸುತ್ತಿದ್ದಾರೆ ಎಂದು ಆರೋಪಿಸಿ ಶಿಕ್ಷಕಿ ಸಿಸ್ಟರ್ ಪ್ರಭಾ ವಿರುದ್ದ ವಿದ್ಯಾರ್ಥಿ ಪೋಷಕರಾದ ಶರತ್ ಕುಮಾರ್ ಎಂಬವವರು ಪಾಂಡೇಶ್ವರ ಪೊಲೀಸ್ ಠಾಣೆಗೆ ನಿನ್ನೆ ದೂರು ನೀಡಿದ್ದರು.
ಸಿಸ್ಟರ್ ಪ್ರಭಾ ಫೆ.8 ರಂದು ‘Work is worship’ ಎಂಬ ವಿಷಯ ಬಗ್ಗೆ ಪಾಠ ಮಾಡುತ್ತಿದ್ದರು. ಈ ವೇಳೆ ಹಿಂದೂ ಧರ್ಮದ ವಿರುದ್ಧ ಹಿಂದೂ ದೇವರುಗಳ ಬಗ್ಗೆ, ನಮ್ಮ ದೇಶದ ಪ್ರಧಾನಿಗಳ ಬಗ್ಗೆ ಹಾಗೂ ಹಿಂದೂ ಧರ್ಮದ ಅಸ್ತಿತ್ವದ ಬಗ್ಗೆ ಪ್ರಶ್ನಿಸಿ, ಹಿಂದೂ ಧರ್ಮವನ್ನು ನಿಂದಿಸಿ, ಹೀಯಾಳಿಸಿ, ತುಚ್ಛವಾಗಿ ಕೆಟ್ಟ ಶಬ್ದಗಳನ್ನು ಪ್ರಯೋಗಿಸಿದ್ದರು ಎಂದು ಆರೋಪಿಸಲಾಗಿದೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…