Featured

ಮಂಗಳೂರು: ಶ್ರೀಲಂಕಾದಲ್ಲಿ ಆರ್ಥಿಕ ಸಂಕಷ್ಟ, ರಾಜಕೀಯ ಬಿಕ್ಕಟ್ಟು : ಅಲ್ಲಿನ ಪ್ರಜೆಗಳು ಅಕ್ರಮವಾಗಿ ಭಾರತಕ್ಕೆ  ನುಸುಳುವ ಸಾಧ್ಯತೆ : ಕರಾವಳಿ ಕಾವಲು ಪಡೆ ಎಚ್ಚರಿಕೆ – Vishwanews24

ಮಂಗಳೂರು: ಶ್ರೀಲಂಕಾದಲ್ಲಿ ಆರ್ಥಿಕ ಸಂಕಷ್ಟ, ರಾಜಕೀಯ ಬಿಕ್ಕಟ್ಟು : ಅಲ್ಲಿನ ಪ್ರಜೆಗಳು ಅಕ್ರಮವಾಗಿ ಭಾರತಕ್ಕೆ  ನುಸುಳುವ ಸಾಧ್ಯತೆ – ಕರಾವಳಿ ಕಾವಲು ಪಡೆ ಎಚ್ಚರಿಕೆ

ಮಂಗಳೂರು: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಆರ್ಥಿಕ ಸಂಕಷ್ಟ, ರಾಜಕೀಯ ಬಿಕ್ಕಟ್ಟು ಉಂಟಾಗಿರುವುದರಿಂದ ಅಲ್ಲಿನ ಜನ ಅಕ್ರಮವಾಗಿ ಸಮುದ್ರ ಮಾರ್ಗದ ಮೂಲಕ ಭಾರತಕ್ಕೆ ನುಸುಳುವ ಸಾಧ್ಯತೆ ಇದೆ ಎಂದು ಕರಾವಳಿ ಕಾವಲು ಪೊಲೀಸ್ ಠಾಣೆ ಎಚ್ಚರಿಕೆ ನೀಡಿದೆ.

ಶ್ರೀಲಂಕಾ ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು ಉಂಟಾಗಿರುವುದರಿಂದ ಅಗತ್ಯವಸ್ತುಗಳಿಗಾಗಿ ಜನ ಪರದಾಟ ನಡೆಸುತ್ತಿದ್ದು, ಆಂತರಿಕ ಕಲಹದಿಂದ ತತ್ತರಿಸಿದ್ದು, ಸಮುದ್ರ ಸೇರಿದಂತೆ ಇನ್ನಿತರೆ ಮಾರ್ಗಗಳ ಮೂಲಕ ಭಾರತಕ್ಕೆ ಅಕ್ರಮವಾಗಿ ನುಸುಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಾಗ್ರತೆ ವಹಿಸುವಂತೆ ಮಂಗಳೂರಿನ ಕರಾವಳಿ ಕಾವಲು ಪೊಲೀಸ್ ಠಾಣೆ ತಿಳಿಸಿದೆ.

ಅಪರಿಚಿತ ವ್ಯಕ್ತಿಗಳಿಗೆ ಮನೆ ಬಾಡಿಗೆ ನೀಡುವ ಮುನ್ನ ಅವರ ಪೂರ್ವಾಪರ ಮಾಹಿತಿ ತಿಳಿದು ದಾಖಲೆ ಪಡೆದು, ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿರುವ ಕರಾವಳಿ ಕಾವಲು ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಅವರು ಈ ಸಂಬಂಧ ಉತ್ತರ ‘ದಕ್ಕೆ’ ಬಂದರಿನ ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘಕ್ಕೆ ಪತ್ರ ಕಳುಹಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago