ಮಂಗಳೂರು: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಆರ್ಥಿಕ ಸಂಕಷ್ಟ, ರಾಜಕೀಯ ಬಿಕ್ಕಟ್ಟು ಉಂಟಾಗಿರುವುದರಿಂದ ಅಲ್ಲಿನ ಜನ ಅಕ್ರಮವಾಗಿ ಸಮುದ್ರ ಮಾರ್ಗದ ಮೂಲಕ ಭಾರತಕ್ಕೆ ನುಸುಳುವ ಸಾಧ್ಯತೆ ಇದೆ ಎಂದು ಕರಾವಳಿ ಕಾವಲು ಪೊಲೀಸ್ ಠಾಣೆ ಎಚ್ಚರಿಕೆ ನೀಡಿದೆ.
ಶ್ರೀಲಂಕಾ ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು ಉಂಟಾಗಿರುವುದರಿಂದ ಅಗತ್ಯವಸ್ತುಗಳಿಗಾಗಿ ಜನ ಪರದಾಟ ನಡೆಸುತ್ತಿದ್ದು, ಆಂತರಿಕ ಕಲಹದಿಂದ ತತ್ತರಿಸಿದ್ದು, ಸಮುದ್ರ ಸೇರಿದಂತೆ ಇನ್ನಿತರೆ ಮಾರ್ಗಗಳ ಮೂಲಕ ಭಾರತಕ್ಕೆ ಅಕ್ರಮವಾಗಿ ನುಸುಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಾಗ್ರತೆ ವಹಿಸುವಂತೆ ಮಂಗಳೂರಿನ ಕರಾವಳಿ ಕಾವಲು ಪೊಲೀಸ್ ಠಾಣೆ ತಿಳಿಸಿದೆ.
ಅಪರಿಚಿತ ವ್ಯಕ್ತಿಗಳಿಗೆ ಮನೆ ಬಾಡಿಗೆ ನೀಡುವ ಮುನ್ನ ಅವರ ಪೂರ್ವಾಪರ ಮಾಹಿತಿ ತಿಳಿದು ದಾಖಲೆ ಪಡೆದು, ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿರುವ ಕರಾವಳಿ ಕಾವಲು ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಅವರು ಈ ಸಂಬಂಧ ಉತ್ತರ ‘ದಕ್ಕೆ’ ಬಂದರಿನ ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘಕ್ಕೆ ಪತ್ರ ಕಳುಹಿಸಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…