Featured

ಮಂಗಳೂರು: ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಗಲುವಿಕೆಯು ಅಪಾರ ಭಕ್ತಸಮೂಹಕ್ಕೆ ಆಘಾತ ಉಂಟು ಮಾಡಿದೆ : ನಳಿನ್‍ಕುಮಾರ್ ಸಂತಾಪ – Vishwanews24

ಮಂಗಳೂರು: ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಗಲುವಿಕೆಯು ಅಪಾರ ಭಕ್ತಸಮೂಹಕ್ಕೆ ಆಘಾತವನ್ನು ಉಂಟು ಮಾಡಿದೆ : ನಳಿನ್‍ಕುಮಾರ್  ಸಂತಾಪ

ಮಂಗಳೂರು: ವಿಜಯಪುರ ಜ್ಞಾನಯೋಗಾಶ್ರಮದ ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಜಯಪುರದ ಜೀವಂತ ದೇವರು ಎಂದೇ ಪ್ರಸಿದ್ಧರಾದವರು. ಅವರ ಅಗಲುವಿಕೆಯು ನಾಡಿಗೆ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿನ ಅವರ ಅಪಾರ ಭಕ್ತಸಮೂಹಕ್ಕೆ ಆಘಾತವನ್ನು ಉಂಟು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರೇ ಶ್ರೀ ಸಿದ್ದೇಶ್ವರ ಸ್ವಾಮಿಗಳವರು, ಇವರು ಸಂತರಷ್ಟೇ ಅಲ್ಲ ಜ್ಞಾನೋಪಾಸಕರು ಕೂಡ ಆಗಿದ್ದರು. ಆಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭಾವಿಗಳೂ ಮಧುರ ಸ್ವಭಾವದವರೂ ಆಗಿದ್ದು ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಷ್ಟಾಂತರಾಗಿದ್ದರು. ಒಬ್ಬ ಜ್ಞಾನಯೋಗಿಗಳ ರೂಪದಲ್ಲಿ ಅವರು ಮುಂದೆಯೂ ನಮ್ಮೊಂದಿಗೆ ಇರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ವಿಜಯಪುರದ ಜ್ಞಾನಯೋಗಾಶ್ರಮ ಜನತೆಗೆ ಜ್ಞಾನದಾಸೋಹ ನೀಡುವ ವಿಶಿಷ್ಟ ಕೇಂದ್ರವಾಗಿದೆ. ವಿಜಯಪುರ ಜ್ಞಾನಯೋಗಾಶ್ರಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಶ್ರೀ ಸಿದ್ದೇಶ್ವರರು ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದವರು. ಸಿದ್ದೇಶ್ವರರ ಪ್ರವಚನ ಕೇಳಿದವರು ಅದರಲ್ಲೇ ಅನುರಕ್ತರಾಗಿ ಬಿಡುತ್ತಾರೆ. ಅವರ ಪ್ರವಚನ ಕಾರ್ಯಕ್ರಮ ಎಲ್ಲಿ ಏರ್ಪಡಿಸಿದರೂ ಸಹ ಅಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರುತ್ತಿದ್ದರು. ಒಂದು ಗಂಟೆಯ ಅವರ ಪ್ರವಚನದುದ್ದಕ್ಕೂ ಸೇರಿದ ಅಷ್ಟು ತುಂಬು ತನ್ಮಯತೆಯಿಂದ ಕುಳಿತಿರುತ್ತಿದ್ದರು. ಸೂಜಿಗಲ್ಲಿನಂತಹ ಸೆಳೆತ, ಅವರು ಭಾಷೆ, ಧಾಟಿ, ಪದಪ್ರಯೋಗ, ಉದಾಹಣೆಗಳ ಮೂಲಕ ಪ್ರಚಲಿತ ಸಂಗತಿಗಳನ್ನು ಸಮ್ಮಿಳಿತಗೊಳಿಸುತ್ತಿದ್ದರು ಎಂದು ವಿವರಿಸಿದ್ದಾರೆ. ತಮ್ಮ ಗುರುಗಳು ಸ್ಥಾಪಿಸಿದ ನೂರಾರು ವಿದ್ಯಾ ಸಂಸ್ಥೆಗಳನ್ನು ಸಿದ್ದೇಶ್ವರರು ಮುಂದುವರಿಸಿಕೊಂಡು ಬರುತ್ತಿದ್ದರು. ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎಂಬ ದಾಸ ವಾಣಿಯಂತೆ ಅವರು ನಡೆದವರು ಎಂದಿದ್ದಾರೆ.

ಪೂಜ್ಯರು ಉಪನಿಷತ್ತುಗಳು, ಭಗವದ್ಗೀತೆ, ಯೋಗಸೂತ್ರ, ವಚನಶಾಸ್ತ್ರ ಮುಂತಾದ ವಿಷಯಗಳ ಬಗೆಗೆ ತಾವು ಹೇಗೆ ಗುರು ಮುಖೇನ ಕಲಿತ ಜ್ಞಾನವನ್ನು ಬಳಸಿಕೊಂಡು ಬೋಧಪ್ರದ ಪ್ರವಚನಗಳನ್ನು ನೀಡುತ್ತಿದ್ದರು. ಗಹನವಾದ ವೇದಾಂತ ತತ್ವಗಳನ್ನು ಅತ್ಯಂತ ಸರಳವಾಗಿ ಜನಮಾನಸದಲ್ಲಿ ಉಳಿಯುವಂತೆ ವಿವರಿಸುವುದೇ ಅವರ ವೈಶಿಷ್ಟ್ಯವಾಗಿತ್ತು. ಅವರ ಭಾಷಣಗಳು ಪ್ರತಿಯೊಬ್ಬರ ಜೀವನದಲ್ಲಿ ಅದ್ಭುತ ರೂಪಾಂತರವನ್ನು ತರುತ್ತಿದ್ದವು. ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಜೀವಂತ ದೇವರಿಗೆ ಹೋಲಿಸಬಹುದಾದ ಮಾನವರಲ್ಲಿ ಒಬ್ಬರು ಎಂದು ತಿಳಿಸಿದ್ದಾರೆ.

ಅವರು ವಚನಗಳ ಬಗ್ಗೆ ಹೊಸ ಬೆಳಕನ್ನು ಚೆಲ್ಲಿದ್ದಾರೆ. ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಸರಳವಾದ ಸ್ಪೂರ್ತಿದಾಯಕ ಜೀವನ ಶೈಲಿಯನ್ನು ಹೊಂದಿದವರು. ಅವರು ಜೀವನವನ್ನು ಆಧ್ಯಾತ್ಮಿಕತೆಗೆ ಮೀಸಲಿಟ್ಟಿದ್ದಾರೆ ಮತ್ತು ಭಾರತದ ಸಂತರು ಮತ್ತು ಸಿಯರ್ಸ್ ಕೃತಿಗಳ ಆಧಾರದ ಮೇಲೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಅವರ ಪುಸ್ತಕಗಳು ನಮಗೆ ಮಾರ್ಗದರ್ಶನ ನೀಡಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪದ್ಮಶ್ರೀ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಅನ್ನು ನಯವಾಗಿಯೇ ನಿರಾಕರಿಸಿದ್ದು ಅವರ ಶ್ರೇಷ್ಠ ವ್ಯಕ್ತಿತ್ವಕ್ಕೆ ಕೈಗನ್ನಡಿ ಎಂದು ಅವರು ತಿಳಿಸಿದ್ದಾರೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago