ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಪ್ರಕರಣ ಸಂಬಂಧ ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಹಿನ್ನಲೆಯಲ್ಲಿ ಖುದ್ದು ಅವರೊಂದಿಗೆ ಮಾತುಕತೆ ನಡೆಸಿ ಘಟನೆಯ ಬಗ್ಗೆ ಎಲ್ಲಾ ಮಾಹಿತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಅವರು, “ಈಗಾಗಲೇ ನಾನು ಸಚಿವ ಈಶ್ವರಪ್ಪ ಅವರಲ್ಲಿ ದೂರವಾಣಿ ಮೂಲಕ ಮಾತನಾಡಿದ್ದೇನೆ. ಘಟನೆಯ ಬಗ್ಗೆ ಸಮಗ್ರವಾಗಿ ಅವರೊಂದಿಗೆ ಚರ್ಚಿಸಿ, ಮಾಹಿತಿ ಕಲೆ ಹಾಕಿ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಮಾಡುತ್ತೇನೆ” ಎಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
ಸಿಎಂ ಹೇಳಿದರೆ ರಾಜೀನಾಮೆ ನೀಡುವ ಎಂಬ ಸಚಿವ ಈಶ್ವರಪ್ಪ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ನನಗೆ ತಿಳಿದಿಲ್ಲ. ಅವರನ್ನು ಭೇಟಿಯಾಗಿ ಮಾತನಾಡುತ್ತೇನೆ. ಕಾಂಗ್ರೆಸ್ ಇದರಲ್ಲಿ ತಪ್ಪು ಕಂಡುಹಿಡಿಯಲು ಪ್ರಯತ್ನ ಮಾಡುತ್ತಿದೆ. ಆದರೆ ತನಿಖೆಯಲ್ಲಿ ಸತ್ಯಾಂಶ ಗೊತ್ತಾಗಲಿದೆ. ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪವನ್ನು ಮಾಡೋದಿಲ್ಲ ಎಂದು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…