ಮಂಗಳೂರು: ನಗರದ ಸಂತ ಜೆರೋಸಾ ಶಾಲೆಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಮತ್ತು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಇಬ್ಬರು ಕಾರ್ಪೊರೇಟರ್‌ಗಳು ಮತ್ತು ಇತರ ಹಲವು ಮಂದಿಯ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಲೆಯ ಶಿಕ್ಷಕಿಯೊಬ್ಬರು ಹಿಂದೂ ಧರ್ಮ ಮತ್ತು ದೇವರನ್ನು ಅವಹೇಳಿಸಿದ್ದಾರೆ ಎಂದು ಆರೋಪಿಸಿ ಶಾಲೆಯ ವಿದ್ಯಾರ್ಥಿಗಳ ಹೆತ್ತವರು ಎನ್ನಲಾದ ಕೆಲವು ಮಂದಿ ಸಂಘ ಪರಿವಾರದ ಕಾರ್ಯಕರ್ತರ ಜೊತೆಗೂಡಿ ಶಾಲೆಯ ಬಳಿ ಅಶಾಂತಿಯ ವಾತಾವರಣ ಸೃಷ್ಟಿಸಿದ್ದರು ಎಂದು ಹೇಳಲಾಗಿತ್ತು.
ಫೆ.12ರಂದು ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ಶಾಲೆಯ ಮುಂದೆ ಜಮಾಯಿಸಿ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರನ್ನು ಶಾಲೆಯ ವಿರುದ್ಧ ಎತ್ತಿಕಟ್ಟುವಂತಹ ಪ್ರಯತ್ನ ನಡೆಸಿದ್ದರು ಎಂದು ಆಪಾದಿಸಲಾಗಿತ್ತು.
ಇದೀಗ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಕಾರ್ಪೊರೇಟರ್‌ಗಳಾದ ಸಂದೀಪ್ ಗರೋಡಿ, ಭರತ್ ಕುಮಾರ್, ಸಂಘಪರಿವಾರದ ಶರಣ್ ಪಂಪ್‌ವೆಲ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಆರೋಪಿಗಳು ಶಾಲೆಯ ಬಳಿ ಅಕ್ರಮವಾಗಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿ, ಶಾಲೆಯ ಮುಂದೆ ಅಕ್ರಮವಾಗಿ ಸೇರಿ ಜೈ ಶ್ರೀರಾಮ್ ಎಂದು ಘೋಷಣೆಗಳನ್ನು ಕೂಗಿ ಕ್ರಿಶ್ಚಿಯನ್ ಧರ್ಮದ ವಿರುದ್ಧ ಮಾತನಾಡಿ, ಶಾಲಾಡಳಿತ ಮಂಡಳಿಯ ನಿಯಮಗಳನ್ನು ವಿದ್ಯಾರ್ಥಿಗಳು ಉಲ್ಲಂಘಿಸುವಂತೆ ಪ್ರಚೋದಿಸಿ, ಹಿಂದೂ-ಕ್ರಿಶ್ಚಿಯನರ ಮಧ್ಯೆ ಗಲಭೆ ಸೃಷ್ಟಿಸಲು ಪ್ರಚೋದಿಸಿರುವುದಾಗಿ ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…