Featured

ಮಂಗಳೂರು: ಸಂತ ಜೆರೋಸಾ ಶಾಲಾ ವಿವಾದ: ಶಾಸಕರು, ಕಾರ್ಪೊರೇಟರ್ ಸಹಿತ ಹಲವರ ವಿರುದ್ಧ ‌ಪ್ರಕರಣ ದಾಖಲು‌ – Vishwanews24

ಮಂಗಳೂರು: ಸಂತ ಜೆರೋಸಾ ಶಾಲಾ ವಿವಾದ: ಶಾಸಕರು, ಕಾರ್ಪೊರೇಟರ್ ಸಹಿತ ಹಲವರ ವಿರುದ್ಧ ‌ಪ್ರಕರಣ ದಾಖಲು‌

ಮಂಗಳೂರು: ನಗರದ ಸಂತ ಜೆರೋಸಾ ಶಾಲೆಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಮತ್ತು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಇಬ್ಬರು ಕಾರ್ಪೊರೇಟರ್‌ಗಳು ಮತ್ತು ಇತರ ಹಲವು ಮಂದಿಯ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲೆಯ ಶಿಕ್ಷಕಿ‌ಯೊಬ್ಬರು‌ ಹಿಂದೂ ಧರ್ಮ ಮತ್ತು ದೇವರನ್ನು ಅವಹೇಳಿಸಿದ್ದಾರೆ ಎಂದು ಆರೋಪಿಸಿ ಶಾಲೆಯ ವಿದ್ಯಾರ್ಥಿಗಳ ಹೆತ್ತವರು ಎನ್ನಲಾದ ಕೆಲವು ಮಂದಿ ಸಂಘ ಪರಿವಾರದ ಕಾರ್ಯಕರ್ತರ ಜೊತೆಗೂಡಿ ಶಾಲೆಯ ಬಳಿ ಅಶಾಂತಿಯ ವಾತಾವರಣ ಸೃಷ್ಟಿಸಿದ್ದರು ಎಂದು ಹೇಳಲಾಗಿತ್ತು.

ಫೆ.12ರಂದು ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ಶಾಲೆಯ‌‌ ಮುಂದೆ ಜಮಾಯಿಸಿ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರನ್ನು ಶಾಲೆಯ ವಿರುದ್ಧ ಎತ್ತಿಕಟ್ಟುವಂತಹ ಪ್ರಯತ್ನ ನಡೆಸಿದ್ದರು ಎಂದು ಆಪಾದಿಸಲಾಗಿತ್ತು.

ಇದೀಗ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಕಾರ್ಪೊರೇಟರ್‌ಗಳಾದ ಸಂದೀಪ್ ಗರೋಡಿ, ಭರತ್ ಕುಮಾರ್, ಸಂಘಪರಿವಾರದ ಶರಣ್ ಪಂಪ್‌ವೆಲ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಗಳು ಶಾಲೆಯ ಬಳಿ ಅಕ್ರಮವಾಗಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿ, ಶಾಲೆಯ ಮುಂದೆ ಅಕ್ರಮವಾಗಿ ಸೇರಿ ಜೈ ಶ್ರೀರಾಮ್ ಎಂದು ಘೋಷಣೆಗಳನ್ನು ಕೂಗಿ ಕ್ರಿಶ್ಚಿಯನ್ ಧರ್ಮದ ವಿರುದ್ಧ ಮಾತನಾಡಿ, ಶಾಲಾಡಳಿತ ಮಂಡಳಿಯ ನಿಯಮಗಳನ್ನು ವಿದ್ಯಾರ್ಥಿಗಳು ಉಲ್ಲಂಘಿಸುವಂತೆ ಪ್ರಚೋದಿಸಿ, ಹಿಂದೂ-ಕ್ರಿಶ್ಚಿಯನರ ಮಧ್ಯೆ ಗಲಭೆ ಸೃಷ್ಟಿಸಲು ಪ್ರಚೋದಿಸಿರುವುದಾಗಿ ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಲಾಗಿದೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

23 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

23 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

23 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago