Featured

ಮಂಗಳೂರು: ಸಂಬಂಧಿಕರಿಗೆ ಲಿವರ್ ದಾನ ಮಾಡಿದ ಉಪನ್ಯಾಸಕಿ ಅಸ್ವಸ್ಥಗೊಂಡು ಹಠಾತ್ ಸಾವು  – vishwanews24

ಮಂಗಳೂರು: ಸಂಬಂಧಿಕರಿಗೆ ಲಿವರ್ ದಾನ ಮಾಡಿದ ಉಪನ್ಯಾಸಕಿ ಅಸ್ವಸ್ಥಗೊಂಡು ಹಠಾತ್ ಸಾವು

ಮಂಗಳೂರು : ಸಂಬಂಧಿ ಮಹಿಳೆಯೊಬ್ಬರಿಗೆ ಲಿವರ್ ದಾನ ಮಾಡಿ ಅವರ ಜೀವ ಉಳಿಸಿದ್ದ ನಗರದ ಉಪನ್ಯಾಸಕಿ ಅರ್ಚನಾ ಕಾಮತ್ (33) ಎಂಬವರು ಭಾನುವಾರ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ತನ್ನ ಪತಿಯ ಸಂಬಂಧಿ ಮಹಿಳೆಗೆ ಅನಾರೋಗ್ಯ ಉಂಟಾಗಿದ್ದು, ಅವರಿಗೆ ಲಿವರ್‌ನ ಅಗತ್ಯವಿತ್ತು ಎಂದು ಹೇಳಲಾಗಿದೆ. ಅವರಿಗೆ ಲಿವರ್ ದಾನ ಮಾಡಲೆಂದು ಹಲವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಆದರೆ ತಪಾಸನೆಗೆ ಒಳಪಟ್ಟವರ ಪೈಕಿ ಯಾರೊಬ್ಬರ ರಕ್ತದ ಗುಂಪು ಕೂಡ ಹೊಂದಾಣಿಕೆಯಾಗಿರಲಿಲ್ಲ. ಆದರೆ ಉಪನ್ಯಾಸಕಿ ಅರ್ಚನಾರ ರಕ್ತದ ಗುಂಪು ಹೊಂದಾಣಿಕೆಯಾಗಿತ್ತು. ಹಾಗಾಗಿ ಅರ್ಚನಾ ಲಿವರ್ ಭಾಗದ ದಾನಕ್ಕೆ ಒಪ್ಪಿದ್ದರು. ಅದರಂತೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಅರ್ಚನಾರ ಲಿವರ್‌ನ ಭಾಗಶಃ ಭಾಗ ತೆಗೆದು ಸಂಬಂಧಿ ಮಹಿಳೆಗೆ ಜೋಡಿಸುವ ಶಸ್ತ್ರಚಿಕಿತ್ಸೆ ನಡೆದಿತ್ತು. ಅಲ್ಲದೆ ಆರೋಗ್ಯದಿಂದಿದ್ದ ಅರ್ಚನಾ ಆಸ್ಪತ್ರೆಯಿಂದ ಬಿಡುಗಡೆ ಕೂಡ ಹೊಂದಿದ್ದರು.

4 ದಿನಗಳ ಹಿಂದೆ ಅರ್ಚನಾ ಏಕಾಏಕಿ ಅಸ್ವಸ್ಥಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಾವನ್ನಪ್ಪಿದ್ದಾರೆ. ಇನ್ನು ಅರ್ಚನಾರಿಂದ ಲಿವರ್ ದಾನ ಪಡೆದ ಮಹಿಳೆ ಆರೋಗ್ಯವಾಗಿದ್ದಾರೆಂದು ತಿಳಿದುಬಂದಿದೆ. ಇನ್ನು ಅರ್ಚನಾ ಅವರ ಹಠಾತ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಅರ್ಚನಾ ಅವರು ನಗರದ ಕೆನರಾ ಕಾಲೇಜಿನಲ್ಲಿ ಈ ಮೊದಲು ಉಪನ್ಯಾಸಕಿಯಾಗಿದ್ದರು. ಬಳಿಕ ಮಣೇಲ್ ಶ್ರೀನಿವಾಸ ನಾಯಕ್ ಎಂಬಿಎ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅರ್ಚನಾ ಪತಿ ಸಿಎ ಚೇತನ್ ಕಾಮತ್ ಮತ್ತು 4 ವರ್ಷ ಪ್ರಾಯದ ಪುತ್ರನನ್ನು ಅಗಲಿದ್ದಾರೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

16 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

26 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

44 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

48 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

56 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago