ಮಂಗಳೂರು : ಸಂಬಂಧಿ ಮಹಿಳೆಯೊಬ್ಬರಿಗೆ ಲಿವರ್ ದಾನ ಮಾಡಿ ಅವರ ಜೀವ ಉಳಿಸಿದ್ದ ನಗರದ ಉಪನ್ಯಾಸಕಿ ಅರ್ಚನಾ ಕಾಮತ್ (33) ಎಂಬವರು ಭಾನುವಾರ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ತನ್ನ ಪತಿಯ ಸಂಬಂಧಿ ಮಹಿಳೆಗೆ ಅನಾರೋಗ್ಯ ಉಂಟಾಗಿದ್ದು, ಅವರಿಗೆ ಲಿವರ್‌ನ ಅಗತ್ಯವಿತ್ತು ಎಂದು ಹೇಳಲಾಗಿದೆ. ಅವರಿಗೆ ಲಿವರ್ ದಾನ ಮಾಡಲೆಂದು ಹಲವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಆದರೆ ತಪಾಸನೆಗೆ ಒಳಪಟ್ಟವರ ಪೈಕಿ ಯಾರೊಬ್ಬರ ರಕ್ತದ ಗುಂಪು ಕೂಡ ಹೊಂದಾಣಿಕೆಯಾಗಿರಲಿಲ್ಲ. ಆದರೆ ಉಪನ್ಯಾಸಕಿ ಅರ್ಚನಾರ ರಕ್ತದ ಗುಂಪು ಹೊಂದಾಣಿಕೆಯಾಗಿತ್ತು. ಹಾಗಾಗಿ ಅರ್ಚನಾ ಲಿವರ್ ಭಾಗದ ದಾನಕ್ಕೆ ಒಪ್ಪಿದ್ದರು. ಅದರಂತೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಅರ್ಚನಾರ ಲಿವರ್‌ನ ಭಾಗಶಃ ಭಾಗ ತೆಗೆದು ಸಂಬಂಧಿ ಮಹಿಳೆಗೆ ಜೋಡಿಸುವ ಶಸ್ತ್ರಚಿಕಿತ್ಸೆ ನಡೆದಿತ್ತು. ಅಲ್ಲದೆ ಆರೋಗ್ಯದಿಂದಿದ್ದ ಅರ್ಚನಾ ಆಸ್ಪತ್ರೆಯಿಂದ ಬಿಡುಗಡೆ ಕೂಡ ಹೊಂದಿದ್ದರು.
4 ದಿನಗಳ ಹಿಂದೆ ಅರ್ಚನಾ ಏಕಾಏಕಿ ಅಸ್ವಸ್ಥಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಾವನ್ನಪ್ಪಿದ್ದಾರೆ. ಇನ್ನು ಅರ್ಚನಾರಿಂದ ಲಿವರ್ ದಾನ ಪಡೆದ ಮಹಿಳೆ ಆರೋಗ್ಯವಾಗಿದ್ದಾರೆಂದು ತಿಳಿದುಬಂದಿದೆ. ಇನ್ನು ಅರ್ಚನಾ ಅವರ ಹಠಾತ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಅರ್ಚನಾ ಅವರು ನಗರದ ಕೆನರಾ ಕಾಲೇಜಿನಲ್ಲಿ ಈ ಮೊದಲು ಉಪನ್ಯಾಸಕಿಯಾಗಿದ್ದರು. ಬಳಿಕ ಮಣೇಲ್ ಶ್ರೀನಿವಾಸ ನಾಯಕ್ ಎಂಬಿಎ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅರ್ಚನಾ ಪತಿ ಸಿಎ ಚೇತನ್ ಕಾಮತ್ ಮತ್ತು 4 ವರ್ಷ ಪ್ರಾಯದ ಪುತ್ರನನ್ನು ಅಗಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…