Featured

ಮಂಗಳೂರು : ಸತ್ಯಜಿತ್‌ ಸುರತ್ಕಲ್‌ ಗನ್‌ ಮ್ಯಾನ್‌ ಭದ್ರತೆ ಮುಂದುವರಿಸಲು ಒತ್ತಾಯ : ಮನವಿ ಸ್ವೀಕರಿಸಲು ನಿರಾಕರಿಸಿದ ಪೊಲೀಸ್‌ ಕಮಿಷನರ್‌.. – Vishwanews24

ಮಂಗಳೂರು : ಸತ್ಯಜಿತ್‌ ಸುರತ್ಕಲ್‌ ಗನ್‌ ಮ್ಯಾನ್‌ ಭದ್ರತೆ ಮುಂದುವರಿಸಲು ಒತ್ತಾಯ : ಮನವಿ ಸ್ವೀಕರಿಸಲು ನಿರಾಕರಿಸಿದ ಪೊಲೀಸ್‌ ಕಮಿಷನರ್‌..

ಮಂಗಳೂರು : ಹಿಂದೂ ನಾಯಕ, ಬಿಲ್ಲವ ಮುಖಂಡ ಸತ್ಯಜಿತ್‌ ಸುರತ್ಕಲ್‌ ಅವರ ಗನ್‌ ಮ್ಯಾನ್‌ ಭದ್ರತೆಯನ್ನು ಮುಂದುವರೆಸಬೇಕೆಂದು ಮನವಿ ನೀಡಲು ಮುಂದಾದ ಸಾಮಾಜಿಕ ಹೋರಾಟಗಾರ್ತಿ ಪ್ರಸನ್ನ ರವಿ ನೇತ್ರತ್ವದ ನಿಯೋಗ ಮನವಿ ಸ್ವೀಕರಿಸಲು ಮಂಗಳೂರು ಪೊಲೀಸ್ ಕಮಿಷನರ್ ನಿರಾಕರಿಸಿದ್ದಾರೆ.

ಸರಕಾರ ತನ್ನ ಆದೇಶವನ್ನು ಪುನರ್‌ ಪರಿಶೀಲಿಸಿ ಗನ್‌ ಮ್ಯಾನ್‌ ಭದ್ರತೆಯನ್ನು ಮುಂದುವರಿಸ ಬೇಕೆಂದು ಮಂಗಳೂರಿನ ರಾಷ್ಟ್ರ ಭಕ್ತ ವೇದಿಕೆ ಮತ್ತು ದಕ್ಷಿಣ ಕನ್ನಡ ವುಶು ಅಸೋಸಿಯೇಶನ್‌ ಪರವಾಗಿ ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ನೇತ್ರತ್ವದ ನಿಯೋದ ಮಂಗಳೂರು ಪೊಲೀಸ್‌ ಆಯುಕ್ತರ ಕಚೇರಿಗೆ ತೆರಳಿತ್ತು.

ಕನಿಷ್ಟ 5 ಜನರ ನಿಯೋಗದೊಂದಿಗೆ ತೆರಳಿ ಮನವಿ ಸಲ್ಲಿಸಲು ಅವಕಾಶ ಕೊಡಿ ಎಂದು ಬೇಡಿಕೊಂಡರೂ ಪೊಲೀಸ್‌ ಆಯುಕ್ತರು ಸಮ್ಮತಿಸಿಲ್ಲ ಎಂದು ಪ್ರಸನ್ನ ರವಿ ಆರೋಪಿಸಿದ್ದಾರೆ.

ಮಾದ್ಯಮಗಳ ಬಳಿ ಮಾತನಾಡಿ ಅವರು ಪೊಲೀಸ್ ಆಯುಕ್ತರು ಒಬ್ಭರೇ ಬಂದು ಮನವಿ ಕೊಡುವುದಾದರೆ ಮಾತ್ರ ಸ್ವೀಕರಿಸುವುದಾಗಿ ತಿಳಿಸಿದ್ದಾರೆ. ಫೋಟೊ ತೆಗೆಯಲು ಅವಕಾಶ ನಿರಾಕರಿಸಿದ್ದಾರೆ ಎಂದು ಪ್ರಸನ್ನ ರವಿ ಆರೋಪಿಸಿದರು.

ಪೊಲೀಸ್‌ ಆಯುಕ್ತರ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಸನ್ನ ರವಿ ಆಡಳಿತ ನಡೆಸುವ ಸರಕಾರದ ಜತೆ ಪೊಲೀಸರೂ ಶಾಮೀಲಾಗಿದ್ದಾರೆಯೇ ಎಂಬ ಸಂಶಯ ಬರುತ್ತಿದೆ. ಹಣ ಕೊಟ್ಟು ಭದ್ರತೆ ಪಡೆಯಬೇಕೆಂದು ಆಯುಕ್ತರು ಹೇಳುತ್ತಾರೆ.

ಅಂದರೆ ಹಣ ಕೊಟ್ಟರೆ ಟೆರರಿಸ್ಟ್‌ ಗಳಿಗೂ ಗನ್‌ ಮ್ಯಾನ್‌ ಭದ್ರತೆ ಕೊಡುತ್ತಾರೆಯೇ ಎಂದು ಪ್ರಶ್ನಿಸಿದರು.ಸರಕಾರ ಮತ್ತು ಪೊಲೀಸ್‌ ಇಲಾಖೆಯ ಈ ಕ್ರಮದ ವಿರುದ್ಧ ಹೋರಾಟ ನಡೆಸುತ್ತೇನೆ ಎಂದು ಹೇಳಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

5 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

6 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

8 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

8 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

9 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

9 hours ago