ಮಂಗಳೂರು: ಸದ್ಯಕ್ಕೆ ಕರ್ನಾಟಕ-ಕೇರಳ ಅಂತರಾಜ್ಯ ಬಸ್ ಸಂಚಾರ ಪುನರಾರಂಭವಾಗುವುದು ಅನುಮಾನವಾಗಿದ್ದು, ಒಂದು ವಾರ ಯಥಾಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ.
ಮಂಗಳೂರು-ಕಾಸರಗೋಡು ಮಾರ್ಗದಲ್ಲಿ ನ.1ರಿಂದ ಬಸ್ ಸಂಚಾರ ಪುನರಾರಂಭವಾಗುವು ಸಾಧ್ಯತೆ ಇದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡುತ್ತಿವೆ. ಆದರೆ, ಒಂದು ವಾರಗಳ ಕಾಲ ಅಂತರಾಜ್ಯ ಬಸ್ ಸಂಚಾರ ಪುನರಾರಂಭವಾಗದು ಎಂದು ದ.ಕ ಜಿಲ್ಲಾಡಳಿತ ಹೇಳಿದೆ.
ಈ ವಿಚಾರವಾಗಿ ಕೇರಳ ಕೆಎಸ್‌ಆರ್‌ಟಿಸಿಯ ಅಧಿಕಾರಿಗಳು ತಿಳಿಸಿದ್ದು, “ಕರ್ನಾಟಕ ಬಸ್‌ಗಳು ರಾಜ್ಯ ಪ್ರವೇಶಿಸುವುದಕ್ಕಾಗಲಿ, ನಮ್ಮ ಬಸ್‌ಗಳನ್ನು ಕರ್ನಾಟಕಕ್ಕೆ ಬಿಡುವುದಕ್ಕಾಗಲಿ ನಮ್ಮದೇನೂ ಅಭ್ಯಂತರವಿಲ್ಲ. ಕರ್ನಾಟಕ ಸರ್ಕಾರ ನಿಷೇಧ ಹೇರಿರುವ ಹಿನ್ನೆಲೆ ಬಸ್‌ಗಳ ಗಡಿ ದಾಟಲು ಸಾಧ್ಯವಾಗುತ್ತಿಲ್ಲ. ಕರ್ನಾಟಕ ಸರ್ಕಾರ ಅವಕಾಶ ನೀಡಿದ ತಕ್ಷಣವೇ ನಮ್ಮಲ್ಲಿಂದ ಬಸ್ ಪ್ರಾರಂಭಿಸಲಾಗುವುದು” ಎಂದು ಹೇಳಿದ್ದಾರೆ.
“ಕೇರಳದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.5ಕ್ಕಿಂತ ಕೆಳಗೆ ಬಾರದೇ ಇದ್ದಲ್ಲಿ ಅಂತರಾಜ್ಯ ಬಸ್ ಪುನರಾರಂಭಿಸಲು ಸಾಧ್ಯವಿಲ್ಲ. ಈ ಬಗ್ಗೆ ಇನ್ನೂ ಒಂದು ವಾರ ಕಾದು ಪರಿಸ್ಥಿತಿ ಅವಲೋಕಿಸಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ತಿಳಿಸಿದ್ದಾರೆ.
ಕರ್ನಾಟಕ-ಕೇರಳ ಅಂತರಾಜ್ಯ ಬಸ್ ಸಂಚಾರ ನಿರ್ಬಂಧದ ಮಧ್ಯೆಯೇ ಅ.25ರಿಂದ ಕರ್ನಾಟಕದಲ್ಲಿ ಪ್ರಾಥಮಿಕ ಸೇರಿದಂತೆ ಎಲ್ಲಾ ಶಾಲಾ ಹಾಗೂ ಕಾಲೇಜುಗಳು ಪ್ರಾರಂಭವಾಗಿವೆ.
ದ.ಕ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಕಾಸರಗೋಡು ಭಾಗದಿಂದ ಬರುವ ಸುಮಾರು 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ. ಕಡ್ಡಾಯವಾಗಿ ತರಗತಿಗೆ ಹಾಜರಾಗಬೇಕೆಂದಿಲ್ಲ. ಆನ್‌ಲೈನ್ ತರಗತಿಗಳಿಗೂ ಹಾಜರಾಗಲು ಅವಕಾಶ ನೀಡಲಾಗಿದೆ. ಆದರೆ, ಒಂದೂವರೆ ವರ್ಷದಿಂದ ಮನೆಯಲ್ಲಿಯೇ ಉಳಿದಿರುವ ವಿದ್ಯಾರ್ಥಿಗಳ ಪೈಕಿ ಅನೇಕ ಮಂದಿ ಈಗ ತರಗತಿಗೆ ಹಾಜರಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…