Featured

ಮಂಗಳೂರು : ಸಭೆ ಸಮಾರಂಭಗಳಿಗೆ ಶೀಘ್ರವೇ ಹೊಸ ಮಾರ್ಗಸೂಚಿ: ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ-Vishwanews24

ಮಂಗಳೂರು : ಸಭೆ ಸಮಾರಂಭಗಳಿಗೆ ಶೀಘ್ರವೇ ಹೊಸ ಮಾರ್ಗಸೂಚಿ: ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ-Vishwanews24

ಮಂಗಳೂರು,: ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚಿಸಿ ಹೊಸ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ವೆನ್‌ಲಾಕ್ ಆಸ್ಪತ್ರೆಯ ಆಯುಷ್ ವಿಭಾಗದಲ್ಲಿ ಇಂದು ಹಿರಿಯ ಹಾಗೂ 45 ವರ್ಷ ಮೇಲ್ಪಟ್ಟ ಬಿಪಿ, ಶುಗರ್ ಹೊಂದಿರುವ ಪತ್ರಕರ್ತರಿಗೆ ಪ್ರಥಮ ಸುತ್ತಿನ ಲಸಿಕೆಗೆ ಚಾಲನೆ ಹಾಗೂ ತಾವು ಎರಡನೇ ಸುತ್ತಿನ ಲಸಿಕೆಯನ್ನು ಸ್ವೀಕರಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡುತ್ತಿದ್ದರು.

ಕೋವಿಡ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಶಿಸ್ತು ಕ್ರಮ, ದಂಡ ವಿಧಿಸುವ ಪ್ರಕ್ರಿಯೆಯನ್ನೂ ನಡೆಸುವ ಅಗತ್ಯವಿದೆ. ಗಡಿ ಪ್ರದೇಶಗಳಲ್ಲಿ ನಿತ್ಯ ಓಡಾಡುವ ವಿದ್ಯಾರ್ಥಿಗಳು ಹಾಗೂ ಉದ್ಯೋಗಸ್ಥರಿಗೆ ತೊಂದರೆಯಾಗದಂತೆ ಕ್ರಮ ವಹಿಸಿ ಅನಗತ್ಯವಾಗಿ ಸಂಚರಿಸುವವರ ಮೇಲೆ ಕಡಿವಾಣ ಹಾಕಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ :ಒಂದು ವರ್ಷದೊಳಗೆ ದೇಶಾದ್ಯಂತ ಟೋಲ್‌ ಪ್ಲಾಜಾಗಳನ್ನು ತೆಗೆದು ಜಿಪಿಎಸ್‌ ಆಧಾರಿತ ಟೋಲ್‌‌ ಸಂಗ್ರಹ ವ್ಯವಸ್ಥೆಯನ್ನು ಅಳವಡಿಸಲಾಗುವುದು : ನಿತನ್ ಗಡ್ಕರಿ -Vishwanews24

ದ.ಕ. ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಯಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಿಬಿಎಂಪಿ ಮಾರ್ಶಲ್ಸ್ ಮಾದರಿಯಲ್ಲಿ ಮನಪಾ ವ್ಯಾಪ್ತಿಯಲ್ಲಿ ಹೋಂಗಾರ್ಡ್‌ಗಳನ್ನು ಬಳಸಿಕೊಂಡು ಜಾಗೃತಿ ಅಭಿಯಾನ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಆರಂಭದಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಈ ವಿಧಾನ ಅನುಸರಿಸರಿಸಲಾಗುವುದು. ಬಳಿಕ ಜಿಲ್ಲೆಯ ಇತರ ಭಾಗಗಳಿಗೂ ವಿಸ್ತರಿಸಲಾಗುವುದು. ಜನಸಂದಣಿ ಇರುವ ಪ್ರದೇಶಗಳು, ಗಡಿ ಭಾಗ, ಬಸ್ ನಿಲ್ದಾಣ, ಸಭೆ ಸಮಾರಂಭಗಳಲ್ಲಿ ಜಿಲ್ಲಾಡಳಿತದಿಂದ ನಿಯೋಜಿಸಲಾದ ಹೋಂಗಾರ್ಡ್‌ಗಳು ಜಾಗೃತಿ ಮೂಡಿಸುವ, ಪರೀಶಿಲನೆ, ತಪಸಾಣೆ ನಡೆಸುವ ಕೆಲಸ ಮಾಡಲಿದ್ದಾರೆ. ಬಸ್ಸುಗಳನ್ನು ನಿಲ್ಲಿಸಿ ಜನರಿಗೆ ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದಾರೆ. ಇಂದು ಸರಕಾರದ ಮುಖ್ಯ ಕಾರ್ಯದರ್ಶಿ ಜತೆಗಿನ ವೀಡಿಯೋ ಕಾನ್ಫರೆನ್ಸ್ ಸಂದರ್ಭ ಹೆಚ್ಚುವರಿಯಾಗಿ 30ರಷ್ಟು ಹೋಂಗಾರ್ಡ್‌ಗಳ ನಿಯೋಜನೆಗೆ ಅನುಮತಿ ಕೋರಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇದನ್ನೂ ಓದಿ : ಸಿಡಿ ಪ್ರಕರಣ : ಯುವತಿ ಜೊತೆ ಸಂಪರ್ಕ ಹೊಂದಿರುವುದು ನಿಜ, ಆದ್ರೇ.. ಸಿಡಿ ಪ್ರಕರಣದಲ್ಲಿ ತನ್ನ ಪಾತ್ರವಿಲ್ಲ : ನರೇಶ್ ಸ್ಪಷ್ಟನೆ -Vishwanews24

 

 

 

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

3 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

9 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

10 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

11 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

11 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

11 hours ago