Featured

ಮಂಗಳೂರು: ಸಮಾಜ ಸೇವಾ ಸಹಕಾರಿ ಸಂಘದಲ್ಲಿ ನಕಲಿ ಚಿನ್ನದ ಬಳೆ ಅಡವಿಟ್ಟು 2.11 ಕೋ.ರೂ. ಸಾಲ ಪಡೆದು ವಂಚನೆ – vishwanews24

ಬ್ಯಾಂಕ್ ಆಡಳಿತ ಮಂಡಳಿ, ಚಿನ್ನ ಪರೀಕ್ಷಕ ಸಹಿತ 28 ಮಂದಿಯ ವಿರುದ್ಧ ಪ್ರಕರಣ ದಾಖಲು, ಓರ್ವನ ಬಂಧನ

ಮಂಗಳೂರು: ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘದ ಮಂಗಳೂರಿನ ಪಡೀಲ್ ಶಾಖೆಯಲ್ಲಿ ವ್ಯಕ್ತಿಯೊಬ್ಬರಿಗೆ ಆಭರಣ ಈಡಿನ ಆಧಾರದಲ್ಲಿ 2,11,89,800 ರೂ. ಸಾಲ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಈ ಸಹಕಾರಿ ಸಂಘದ ಅಧ್ಯಕ್ಷ, ನಿರ್ದೇಶಕ, ಶಾಖೆಯ ಪ್ರಭಾರ ವ್ಯವಸ್ಥಾಪಕ ಸಹಿತ 28 ಮಂದಿಯ ವಿರುದ್ಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಆರೋಪಿ, ಸಹಕಾರಿ ಸಂಘದ ಸರಪ್ (ಚಿನ್ನ ಪರೀಕ್ಷಕ) ವಿವೇಕ್ ಆಚಾರ್ಯರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ದೂರುದಾರರಾದ ಸಂಘದ ಮಾಜಿ ನಿರ್ದೇಶಕ ಲೋಕನಾಥ ಡಿ. ತಿಳಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಪ್ರಕರಣದ ಬಗ್ಗೆ ಅವರು ಮಾಹಿತಿ ನೀಡಿದರು.

ಪುತ್ತೂರು ಈಶ್ವರಮಂಗಳ ನಿವಾಸಿ, ಪ್ರಕರಣದ ಪ್ರಮುಖ ಆರೋಪಿ ಅಬೂಬಕರ್ ಸಿದ್ದೀಕ್ ಎಂಬಾತ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು 2,22,89,800 ರೂ. ಸಾಲ ಪಡೆದಿದ್ದಾನೆ. ಈ ಚಿನ್ನಾಭರಣವನ್ನು ಪರಿಶೀಲಿಸಿದ ಸಂಘದ ಸರಪ್ ವಿವೇಕ್ ಆಚಾರ್ಯ ಅದು ನೈಜ ಚಿನ್ನವೆಂದು ದೃಢೀಕರಿಸಿದ್ದಾರೆ. ಸಂಘದ ಆಡಳಿತ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಪ್ರಧಾನ ವ್ಯವಸ್ಥಾಪಕರ ನಿರ್ದೇಶನದಂತೆ ಶಾಖೆಯ ಪ್ರಭಾರ ವ್ಯವಸ್ಥಾಪಕ ಪ್ರಶಾಂತ್ ಈ ಭಾರೀ ಮೊತ್ತದ ಸಾಲವನ್ನು ನೀಡಿದ್ದರು ಎಂದು ಆರೋಪಿಸಿದರು.

ಈ ಸಾಲವನ್ನು 2023ರ ನವೆಂಬರ್ 13ರಿಂದ 2024ರ ಫೆಬ್ರವರಿ 3ರ ಅವಧಿಯಲ್ಲಿ ನೀಡಲಾಗಿತ್ತು. ಈ ವರ್ಷದ ಫೆಬ್ರವರಿ ಮೊದಲ ವಾರದಲ್ಲಿ ಈ ವಿಚಾರ ಬೆಳಕಿಗೆ ಬಂದಿದ್ದು, ಸಂಘದ ಹಿರಿಯ ಸದಸ್ಯರು ಮೈಸೂರಿನ ನಿಬಂಧಕರಿಗೆ ಎಪ್ರಿಲ್ 10ರಂದು ದೂರು ಅರ್ಜಿಯನ್ನು ಸಲ್ಲಿಸಿದ್ದರು. ಬಳಿಕ ಜುಲೈ 1ರಂದು ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗೂ ದೂರು ಸಲ್ಲಿಸಲಾಗಿತ್ತು. ಮೈಸೂರು ನಿಬಂಧಕರು, ದ.ಕ. ಉಸ್ತುವಾರಿ ಸಚಿವರು ಹಾಗೂ ದ.ಕ. ಜಿಲ್ಲಾಧಿಕಾರಿಯವರು ಮಂಗಳೂರು ಉಪ ನಿಬಂಧಕರಿಗೆ ನೋಟಿಸ್ ಜಾರಿ ಮಾಡಿ ತನಿಖೆಗೆ ಆದೇಶಿಸಿದ್ದರು. ಆದರೆ ಮಂಗಳೂರು ಉಪ ನಿಬಂಧಕರು ನಮಗೆ ಹೇಳಿಕೆ ದಾಖಲಿಸಲು ಅವಕಾಶ ನೀಡದೆ ಶಾಸನಬದ್ಧ ತನಿಖೆಗೆ ಶಿಫಾರಸು ಮಾಡಿ ತನಿಖೆ ಮುಕ್ತಾಯಗೊಳಿಸಿ ಹಿಂಬರಹ ನೀಡಿದ್ದರು. ಪೊಲೀಸ್ ವರಿಷ್ಠಾಧಿಕಾರಿಯವರು ಆರೋಪಿಗಳ ವಿಚಾರಣೆ ನಡೆಸಿದ ವೇಳೆ ಆರೋಪಿಗಳು ಆರೋಪ ನಿರಾಕರಿಸಿ ಸುಳ್ಳು ಹೇಳಿಕೆ ನೀಡಿದ್ದರು. ಬಳಿಕ ಪ್ರಕರಣ ಕಮಿಷನರೇಟ್ ವ್ಯಾಪ್ತಿಗೆ ಬರುವುದಾಗಿ ಹೇಳಿ ನ್ಯಾಯಾಲಯದಲ್ಲಿ ಸಮಸ್ಯೆ ಬಗೆಹರಿಸುವಂತೆ ತಿಳಿಸಲಾಗಿತ್ತು. ಈ ನಡುವೆ ನಕಲಿ ಚಿನ್ನಾಭರಣದ ಹರಾಜು ಪ್ರಕ್ರಿಯೆ ಗುಪ್ತ ಸ್ಥಳದಲ್ಲಿ ನಡೆಸಲಾಗಿತ್ತು. ಒಟ್ಟು ಸಾಲದಲ್ಲಿ 1.31 ಕೋಟಿ ರೂ. ಬಾಕಿ ಇದ್ದು, ಸಂಘದ ನಿಯಮದ ಪ್ರಕಾರ ಸಾಲಗಾರರೊಬ್ಬರಿಗೆ ಒಂದು ದಿನದಲ್ಲಿ 20 ಲಕ ರೂ. ಮಾತ್ರ ಚಿನ್ನಾಭರಣ ಸಾಲ ನೀಡಬಹುದಾಗಿದ್ದರೂ ನಿಯಮ ಉಲ್ಲಂಘಿಸಲಾಗಿದೆ. ಪ್ರಕರಣದ ಬಗ್ಗೆ ಕಮಿಷನರ್ ರನ್ನು ಭೇಟಿಯಾಗಿ ವಿವರಿಸಿದ ಬಳಿಕ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

ಪ್ರಕರಣಕ್ಕೆ ಸಂಬಂಧಿಸಿ 2ನೇ ಆರೋಪಿ ವಿವೇಕ್ ಆಚಾರ್ಯರ ಬಂಧನವಾಗಿದೆ ಎಂದವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಂಘದ ಹಿರಿಯ ಸದಸ್ಯರಾದ ಸೇಸಪ್ಪ ಟಿ. ಸೋಮಯ್ಯ ಎಚ್., ಸುಂದರ ಬಿ., ರಮೇಶ್ ಬಿ., ಮಾಜಿ ನಿರ್ದೇಶಕ ಹೇಮಂತ ಸಾಲ್ಯಾನ್ ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

5 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

5 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

5 hours ago