ಮಂಗಳೂರು: ಬಂಟ್ವಾಳದ ಕಲ್ಮಂಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ನಾಗರಾಜ ಖಾರ್ವಿ ಕಂಚುಗೋಡು ಅವರು ಶುಕ್ರವಾರ ಬೆಳಿಗ್ಗೆ ನಗರದ ತಣ್ಣೀರು ಬಾವಿ ಬಳಿ ಅರಬ್ಬಿ ಸಮುದ್ರದಲ್ಲಿ ಒಂದು ಕಿ.ಮೀ. ದೂರ ಪದ್ಮಾಸನ ಹಾಕಿ, ಕಾಲಿಗೆ ಸರಪಳಿ ಬಿಗಿದು ಬ್ರೆಸ್ಟ್ ಸ್ಟ್ರೋಕ್ನಲ್ಲಿ ಈಜಿ, ದಾಖಲೆ ಬರೆದರು.
25, ನಿಮಿಷ 16 ಸೆಕೆಂಡ್ 63 ಫ್ರಾಕ್ಷನ್ ನಲ್ಲಿ ಒಂದು ಕಿ.ಮೀ ನಲ್ಲಿ ಒಂದು ಕಿ.ಮೀ ಗುರಿ ತಲುಪಿದರು.
ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ಹಾಗೂ ಈಜು ಮತ್ತು ಯೋಗದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಅವರು ಅರಬ್ಬಿ ಸಮುದ್ರದಲ್ಲಿ ಒಂದು ಕಿ.ಮೀ. ದೂರವನ್ನು ಪದ್ಮಾಸನ ಹಾಕಿ ಕ್ರಮಿಸಿದರು.
ತಣ್ಣೀರುಬಾವಿ ಬೀಚ್ ನಲ್ಲಿ ತನ್ನ ಸಾಧನೆಗಾಗಿ ಆಯ್ದುಕೊಂಡ ಅವರು ಯಶಸ್ವಿಯಾಗಿ ಗುರಿ ತಲುಪಿದರು. ಸಮುದ್ರದಲ್ಲಿ ಬೆಳಗಿನ ಗಾಳಿ ಉತ್ತರದ ಕಡೆಗಿದ್ದರೂ ತನ್ನ ಸಂಪೂರ್ಣ ಶಕ್ತಿ ಬಳಸಿ ದಕ್ಷಿಣದ ಕಡೆಗೆ ನೆಟ್ಟಿದ್ದ ಧ್ವಜವನ್ನು ತಲುಪಿ ಗುರಿ ಮುಟ್ಟಿದರು.
ತರಬೇತುದಾರ ಬಿ.ಕೃಷ್ಣ ನಾಯ್ಕ್ ಅವರು ನಾಗರಾಜ ಖಾರ್ವಿ ಸಾಧನೆಯನ್ನು ಶ್ಲಾಘಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…