Featured

ಮಂಗಳೂರು: ಸರ್ಕಾರಿ ಅಧಿಕಾರಿಗಳ ನಕಲಿ ನಂಬರ್ ಪ್ಲೇಟ್ ಹಾಕಿ ದರೋಡೆಗೆ ಸಂಚು : ಆರೋಪಿಗಳು ಪೊಲೀಸ್ ವಶಕ್ಕೆ -Vishwanews24

ಮಂಗಳೂರು: ನ್ಯಾಶನಲ್ ಕ್ರೈಮ್ ಇನ್ವೆಸ್ಟಿಗೇಶನ್ ಬ್ಯೂರೋ ಎಂದು ಬೋರ್ಡ್ ಹಾಕಿ ಕೇಂದ್ರ ಸರಕಾರದ ಲಾಂಛನ ಉಪಯೋಗಿಸಿ, ದರೋಡೆಗೆ ಸಂಚು ನಡೆಸುತ್ತಿದ್ದ 8 ಜನ ಆರೋಪಿಗಳನ್ನು ಮಂಗಳೂರು ಪೊಲೀಸರು ಪಂಪವೆಲ್ ಬಳಿ ಬಂಧಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ, “ಅಂತರಾಜ್ಯ ವಂಚನಾ ಜಾಲ ಇದಾಗಿದ್ದು , ನಿಖರ ಮಾಹಿತಿ ಮೇರೆಗೆ ಮಂಗಳೂರು ಪೂರ್ವ ಪೊಲೀಸ್‌ ಠಾಣೆಯ ಪೊಲೀಸರು ದಾಳಿ ನಡೆಸಿದ್ದು ಆರೋಪಿಗಳನ್ನು ವಶಪಡಿಸಿ ಅವರಿಂದ ಸುಮಾರು 20 ಲಕ್ಷ ಮೌಲ್ಯದ 2 ಕಾರು, 1 ಪಿಸ್ತೂಲ್‌, 1 ರಿವಾಲ್ವರ್‌ ಮತ್ತು 8 ಜೀವಂತ ಗುಂಡುಗಳನ್ನು ಹಾಗು ಅವರಲ್ಲಿದ್ದ 10 ಮೊಬೈಲ್‌ ಪೋನ್‌ ಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಸ್ಯಾಮ್ ಪೀಟರ್, ಮದನ್, ಸುನಿಲ್ ರಾಜ್, ಕೋದಂಡರಾಮ, ಟಿ.ಕೆ.ಬೋಪಣ್ಣ, ಚಿನ್ನಪ್ಪ, ಚೆರಿಯನ್ ಮತ್ತು ಅಬ್ದುಲ್ ಲತೀಫ್ ಎಂದು ಗುರುತಿಸಲಾಗಿದೆ.

ಈ ತಂಡದ ನಟೋರಿಯಸ್ ಲೀಡರ್ ಕೇರಳ ಮೂಲದ ಸ್ಯಾಮ್ ಪೀಟರ್ ಎಂದು ಗುರುತಿಸಲಾಗಿದ್ದು, ಕೊಲ್ಕತ್ತಾ, ಭುವನೇಶ್ವರ ಸೇರಿ ಹಲವೆಡೆ ಈತನಿಗೆ ಸಂಪರ್ಕವಿದೆ ಎಂದು ವರದಿಯಾಗಿದೆ. ಸರ್ಕಾರಿ ಅಧಿಕಾರಿಗಳ ರೀತಿಯಲ್ಲಿ ಇವರಿಗೆ 5 ಗನ್ ಮ್ಯಾನ್ ರೀತಿ ಇದ್ದರು. ಇವರಿಗೆ ನೆರವು ನೀಡಿದ ಲತೀಫ್ ಮತ್ತು ಚೆರಿಯನ್ ಎಂಬ ಮಂಗಳೂರು ನಿವಾಸಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಯುಕ್ತರು ಮಾಹಿತಿ ನೀಡಿದರು.

ನಂಬರ್ ಪ್ಲೇಟ್‌ ಇಲ್ಲದ ಪೂರ್ಣ ಕಪ್ಪು ಟೆಂಟ್‌ ಹಾಕಲಾಗಿದ್ದ ಕಾರಿನಿಂದ ಶುಕ್ರವಾರ ರಾತ್ರಿ ಆರೋಪಿಗಳನ್ನು ಬಂಧಿಸಲಾಗಿತ್ತು. . ಕಾರಿನಲ್ಲಿ ಚಾಲಕ ಸೇರಿ ಸಫಾರಿ ವಸ್ತ್ರದಲ್ಲಿದ್ದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸ್ಯಾಮ್‌ ಪೀಟರ್ ಎಂಬಾತ ಹೊಟೇಲ್‌ ನಲ್ಲಿದ್ದಾನೆ ಎಂಬ ಮಾಹಿತಿ ನೀಡಿದ್ದರು. ಹೊಟೇಲಿಗೆ ದಾಳಿ ನಡೆಸಿದ ಪೊಲೀಸರು ಅಲ್ಲಿ ತಂಡ ಲೀಡರ್‌ ಸ್ಯಾಮ್‌ ಪೀಟರ್, ಮತ್ತು ಆತನಿಗೆ ಸಹಾಯ ಮಾಡುತ್ತಿದ್ದ ಮಂಗಳೂರಿನ ಮೊಹಿದ್ದೀನ್‌ ಮತ್ತು ಅಬ್ದುಲ್‌ ಲತೀಫ್‌ ಎಂಬವರನ್ನು ವಶಕ್ಕೆ ಪಡೆದಿದ್ದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

18 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

23 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

23 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

23 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago