Judge and gavel in courtroom
ಮಂಗಳೂರು: ನಗರದ ಯುನಿಸೆಕ್ಸ್ ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಗೆ ನ್ಯಾಯಾಲಯ ಫೆಬ್ರವರಿ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಯುನಿಸೆಕ್ಸ್ ಸೆಲೂನ್‌ನಲ್ಲಿ ಅನೈತಿಕ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ರಾಮಸೇನೆ ಕಾರ್ಯಕರ್ತರು ನಗರ ಗುರುವಾರ ಮಧ್ಯಾಹ್ನ ವೇಳೆ ದಾಳಿ ನಡೆಸಿದ್ದರು.
ಸ್ಥಳೀಯ ಮುಖಂಡ ಪ್ರಸಾದ್ ಅತ್ತಾವರ ನೇತೃತ್ವದ ಕಾರ್ಯಕರ್ತರು ಬೆಜೈ ಬಳಿ ಕಾರ್ಯಾಚರಿಸುತ್ತಿದ್ದ ಯುನಿಸೆಕ್ಸ್ ಸಲೂನ್‌ಗೆ ನುಗ್ಗಿ ಸೆಲೂನ್‌ನಲ್ಲಿದ್ದ ಪೀಠೋಪಕರಣಗಳು ಮತ್ತು ಗಾಜುಗಳನ್ನು ಒಡೆದು ಹಾಕಿ ಹಾನಿಗೈದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
12 ಕ್ಕೂ ಹೆಚ್ಚು ಜನರ ಗುಂಪು ಸಲೂನ್‌ನಲ್ಲಿ ಎಲ್ಲವನ್ನೂ ನಾಶಪಡಿಸಿದೆ. ಮಹಿಳಾ ಸಿಬ್ಬಂದಿ ಹಾಗೂ ಇತರರಿಗೆ ಬೆದರಿಕೆ ಹಾಕಿದ್ದರು ಎಂದು ವರದಿಯಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಗೃಹ ಸಚಿವ ಜಿ.ಪರಮೇಶ್ವರ ಅವರು, ಸಂಬಂಧಪಟ್ಟವರನ್ನು ಕೂಡಲೇ ಬಂಧಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿರುವುದಾಗಿ ಹೇಳಿದ್ದರು.
ಇನ್ನು ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಡೆದ ಕೂಡಲೇ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು 14 ಮಂದಿಯನ್ನು ಬಂಧಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…