Featured

ಮಂಗಳೂರು: ಸಲೂನ್ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ಫೆ.7ರವರೆಗೆ ನ್ಯಾಯಾಂಗ ಬಂಧನ – vishwanews24

ಮಂಗಳೂರು: ಸಲೂನ್ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ಫೆ.7ರವರೆಗೆ ನ್ಯಾಯಾಂಗ ಬಂಧನ

ಮಂಗಳೂರು: ನಗರದ ಯುನಿಸೆಕ್ಸ್ ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಗೆ ನ್ಯಾಯಾಲಯ ಫೆಬ್ರವರಿ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಯುನಿಸೆಕ್ಸ್ ಸೆಲೂನ್‌ನಲ್ಲಿ ಅನೈತಿಕ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ರಾಮಸೇನೆ ಕಾರ್ಯಕರ್ತರು ನಗರ ಗುರುವಾರ ಮಧ್ಯಾಹ್ನ ವೇಳೆ ದಾಳಿ ನಡೆಸಿದ್ದರು.

ಸ್ಥಳೀಯ ಮುಖಂಡ ಪ್ರಸಾದ್ ಅತ್ತಾವರ ನೇತೃತ್ವದ ಕಾರ್ಯಕರ್ತರು ಬೆಜೈ ಬಳಿ ಕಾರ್ಯಾಚರಿಸುತ್ತಿದ್ದ ಯುನಿಸೆಕ್ಸ್ ಸಲೂನ್‌ಗೆ ನುಗ್ಗಿ ಸೆಲೂನ್‌ನಲ್ಲಿದ್ದ ಪೀಠೋಪಕರಣಗಳು ಮತ್ತು ಗಾಜುಗಳನ್ನು ಒಡೆದು ಹಾಕಿ ಹಾನಿಗೈದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

12 ಕ್ಕೂ ಹೆಚ್ಚು ಜನರ ಗುಂಪು ಸಲೂನ್‌ನಲ್ಲಿ ಎಲ್ಲವನ್ನೂ ನಾಶಪಡಿಸಿದೆ. ಮಹಿಳಾ ಸಿಬ್ಬಂದಿ ಹಾಗೂ ಇತರರಿಗೆ ಬೆದರಿಕೆ ಹಾಕಿದ್ದರು ಎಂದು ವರದಿಯಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಗೃಹ ಸಚಿವ ಜಿ.ಪರಮೇಶ್ವರ ಅವರು, ಸಂಬಂಧಪಟ್ಟವರನ್ನು ಕೂಡಲೇ ಬಂಧಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿರುವುದಾಗಿ ಹೇಳಿದ್ದರು.

ಇನ್ನು ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಡೆದ ಕೂಡಲೇ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು 14 ಮಂದಿಯನ್ನು ಬಂಧಿಸಿದ್ದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

11 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

12 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

12 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

13 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

14 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

14 hours ago