Featured

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ ಇನ್ ಸ್ಟಾ ಗ್ರಾಂ ಪೇಜ್ ರದ್ದು – vishwanews24

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ ಇನ್ ಸ್ಟಾ ಗ್ರಾಂ ಪೇಜ್ ರದ್ದು

ಮಂಗಳೂರು: 1 ಲಕ್ಷದಷ್ಟು ಸಂಖ್ಯೆಯ ಫಾಲೋವರ್ಸ್ ಹೊಂದಿದ್ದ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ ಇನ್ ಸ್ಟಾ ಗ್ರಾಂ ಪೇಜ್ ರದ್ದು (De Activate) ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ರೇಕಕಾರಿ ಮತ್ತು ಪ್ರಚೋದನ ಕಾರಿಯಾಗಿ ಜನರಲ್ಲಿ ಸಮಾಜದ ವಿವಿಧ ಧರ್ಮ ಹಾಗೂ ವರ್ಗಗಳ ಜನರಲ್ಲಿ ದ್ವೇಷದ ಭಾವನೆ ಹುಟ್ಟು ಹಾಕಿ ಅಪರಾಧ ಕೃತ್ಯ ವೆಸಗುವಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿ, ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ದ್ವೇಷಭಾವನೆ ಹುಟ್ಟುವಂತೆ beary_royal_nawab ಎಂಬ ಇನ್ ಸ್ಟಾ ಗ್ರಾಂ ಫೇಜ್ ನಲ್ಲಿ ಪೋಸ್ಟ್ ಗಳನ್ನು ಮಾಡಲಾಗುತ್ತಿತ್ತು , ಸದ್ರಿ ಇನ್ ಸ್ಟಾ ಗ್ರಾಂ ಫೇಜ್ ಗೆ 01 ಲಕ್ಷದಷ್ಟು ಸಂಖ್ಯೆಯ ಪಾಲೋವರ್ಸ್ ಹೊಂದಿದ್ದರು.

ಮಂಗಳೂರು ನಗರದ ಬರ್ಕೆ ಮತ್ತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಒಟ್ಟು 03 ಪ್ರಕರಣಗಳು ದಾಖಲಾಗಿದ್ದು, ಸದ್ರಿ ಪ್ರಕರಣಗಳಲ್ಲಿ ತನಿಖೆಯನ್ನು ಮಂಗಳೂರು ನಗರ ಸಿ.ಇ.ಎನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿರುತ್ತದೆ.

ಸದ್ರಿ ಪೇಜ್ ನ ಬಗ್ಗೆ ಮಾಹಿತಿ ನೀಡುವಂತೆ, ಸಂಬಂಧಪಟ್ಟ Law Enforcement Agency ರವರಿಗೆ ಪತ್ರ ವ್ಯವಹಾರ ನಡೆಸಲಾಗಿತ್ತು, ಅದರಂತೆ ಸಂಬಂಧಪಟ್ಟ Law Enforcement Agency ರವರು beary_royal_nawab ಎಂಬ ಇನ್ ಸ್ಟಾ ಗ್ರಾಂ ಫೇಜ್ ನ್ನು ಭಾರತ ದೇಶದಲ್ಲಿ ಕಾರ್ಯ ನಿರ್ವಹಿಸದಂತೆ ರದ್ದುಗೊಳಿಸಿರುತ್ತಾರೆ.

ಸದ್ರಿ ಪ್ರಕರಣಗಳ ತನಿಖೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗರವಾಲ್ ಐ.ಪಿ.ಎಸ್, ಉಪ ಪೊಲೀಸ್ ಆಯುಕ್ತರರಾದ ಶ್ರೀ ಸಿದ್ದಾರ್ಥ ಗೋಯಲ್ ಐ.ಪಿ.ಎಸ್. (ಕಾ ಮತ್ತು ಸು) ಮತ್ತು ಶ್ರೀ ರವಿಶಂಕರ್ (ಅ ಮತ್ತು ಸಂ) ರವರ ಮಾರ್ಗದರ್ಶನದಲ್ಲಿ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರೆಸಲಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

19 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago