ಮಂಗಳೂರು: ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರ ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳದ ಎಸ್‌ವಿಎಸ್ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಒಟ್ಟು 5 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಧಿತರನ್ನು ಪ್ರಕಾಶ್ ಶೆಣೈ (44), ಪ್ರದೀಪ್ ಪೂಜಾರಿ (36), ತಾರಾನಾಥ ಬಿ ಎಸ್ ಶೆಟ್ಟಿ (32) ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಎಸ್‌ವಿಎಸ್ ಕಾಲೇಜ್ ವೊಂದರ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ನಡುವಿನ ಪ್ರಾಧ್ಯಾಪಕರ ನೇಮಕಾತಿ ಹಾಗೂ ಆಡಳಿತ ವಿಚಾರದ ಗಲಾಟೆಯಲ್ಲಿ ಕಾಲೇಜಿನ ಮಹಿಳಾ ಪ್ರಾಧ್ಯಾಪಕಿಯ ವಿರುದ್ಧ ಮಾನಹಾನಿಕರವಾದ ಪತ್ರವನ್ನು, ಪೋಸ್ಟರ್ ಗಳನ್ನು ತಯಾರಿಸಿ ಅಂಚೆ ಮೂಲಕ ಸಹೋದ್ಯೋಗಿ ಪ್ರಾಧ್ಯಾಪಕರಿಗೆ, ಕಾಲೇಜಿನ ಪ್ರಾಂಶುಪಾಲರಿಗೆ, ಶಿಕ್ಷಣ ಇಲಾಖೆಯ ಉನ್ನತ ದರ್ಜೆಯ ಅಧಿಕಾರಿಗಳಿಗೆ ಕಳುಹಿಸಿ ಮಾನಹಾನಿ, ಜೀವ ಬೆದರಿಕೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳಾ ಪ್ರಾಧ್ಯಾಪಕಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಮಹಿಳಾ ಪ್ರಾಧ್ಯಾಪಕಿಯ ಮೊಬೈಲ್ ನಂಬ್ರ ಹಾಗೂ ಇ-ಮೇಲ್ ಐಡಿಯನ್ನು ನಮೂದಿಸಿ ಅಶ್ಲೀಲವಾಗಿ ಬರೆದು ಪೋಸ್ಟರ್ ಗಳನ್ನು ತಯಾರಿಸಿ ಸುಳ್ಯ, ಸುಬ್ರಹ್ಮಣ್ಯ, ಸಂಪಾಜೆ, ಮಡಿಕೇರಿ, ಮೈಸೂರು, ಚಿಕ್ಕಮಗಳೂರು, ಮೂಡಿಗೆರೆ, ಬಾಳೆಹೊನ್ನೂರು, ಎನ್ ಆರ್ ಪುರ, ಶಿವಮೊಗ್ಗ ಮುಂತಾದ ಬಸ್ ಸ್ಟಾಂಡ್ ಗಳ ಸಾರ್ವಜನಿಕ ಶೌಚಾಲಯಗಳಲ್ಲಿ ಅಂಟಿಸಿದ್ದು, ಇದನ್ನು ನೋಡಿದ ಸಾರ್ವಜನಿಕರು ಮಹಿಳಾ ಪ್ರಾದ್ಯಾಪಕಿಗೆ ಕರೆ ಮಾಡಿ ಅಶ್ಲೀಲವಾಗಿ ಮಾನಹಾನಿಕರವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದರು. ಆರೋಪಿಗಳ ಪೈಕಿ ಪ್ರದೀಪ್ ಪೂಜಾರಿ ಎಂಬವರ ವಿರುದ್ಧ ಈ ಹಿಂದೆ 2019 ನೇ ಇಸವಿಯಲ್ಲಿ ಕಾಲೇಜ್ ಪ್ರಾಧ್ಯಾಪಕಿಯೊಬ್ಬರಿಗೆ ಮಾನಹಾನಿಗೆ ಯತ್ನಿಸಿದ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರುಗಳ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳಿಂದ 3 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…