Featured

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾನಹಾನಿಕರವಾಗಿ ಪೋಸ್ಟರ್ ತಯಾರಿಸಿ ಪ್ರಾಧ್ಯಾಪಕಿಗೆ ಕಿರುಕುಳ : ಮೂವರ ಬಂಧನ -Vishwanews24

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾನಹಾನಿಕರವಾಗಿ ಪೋಸ್ಟರ್ ತಯಾರಿಸಿ ಪ್ರಾಧ್ಯಾಪಕಿಗೆ ಕಿರುಕುಳ : ಮೂವರ ಬಂಧನ

ಮಂಗಳೂರು: ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರ ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳದ ಎಸ್‌ವಿಎಸ್‌ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಒಟ್ಟು 5 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಧಿತರನ್ನು ಪ್ರಕಾಶ್ ಶೆಣೈ (44), ಪ್ರದೀಪ್ ಪೂಜಾರಿ (36), ತಾರಾನಾಥ ಬಿ ಎಸ್ ಶೆಟ್ಟಿ (32) ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಎಸ್‌ವಿಎಸ್‌ ಕಾಲೇಜ್ ವೊಂದರ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ನಡುವಿನ ಪ್ರಾಧ್ಯಾಪಕರ ನೇಮಕಾತಿ ಹಾಗೂ ಆಡಳಿತ ವಿಚಾರದ ಗಲಾಟೆಯಲ್ಲಿ ಕಾಲೇಜಿನ ಮಹಿಳಾ ಪ್ರಾಧ್ಯಾಪಕಿಯ ವಿರುದ್ಧ ಮಾನಹಾನಿಕರವಾದ ಪತ್ರವನ್ನು, ಪೋಸ್ಟರ್ ಗಳನ್ನು ತಯಾರಿಸಿ ಅಂಚೆ ಮೂಲಕ ಸಹೋದ್ಯೋಗಿ ಪ್ರಾಧ್ಯಾಪಕರಿಗೆ, ಕಾಲೇಜಿನ ಪ್ರಾಂಶುಪಾಲರಿಗೆ, ಶಿಕ್ಷಣ ಇಲಾಖೆಯ ಉನ್ನತ ದರ್ಜೆಯ ಅಧಿಕಾರಿಗಳಿಗೆ ಕಳುಹಿಸಿ ಮಾನಹಾನಿ, ಜೀವ ಬೆದರಿಕೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳಾ ಪ್ರಾಧ್ಯಾಪಕಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಮಹಿಳಾ ಪ್ರಾಧ್ಯಾಪಕಿಯ ಮೊಬೈಲ್ ನಂಬ್ರ ಹಾಗೂ ಇ-ಮೇಲ್ ಐಡಿಯನ್ನು ನಮೂದಿಸಿ ಅಶ್ಲೀಲವಾಗಿ ಬರೆದು ಪೋಸ್ಟರ್ ಗಳನ್ನು ತಯಾರಿಸಿ ಸುಳ್ಯ, ಸುಬ್ರಹ್ಮಣ್ಯ, ಸಂಪಾಜೆ, ಮಡಿಕೇರಿ, ಮೈಸೂರು, ಚಿಕ್ಕಮಗಳೂರು, ಮೂಡಿಗೆರೆ, ಬಾಳೆಹೊನ್ನೂರು, ಎನ್ ಆರ್ ಪುರ, ಶಿವಮೊಗ್ಗ ಮುಂತಾದ ಬಸ್ ಸ್ಟಾಂಡ್ ಗಳ ಸಾರ್ವಜನಿಕ ಶೌಚಾಲಯಗಳಲ್ಲಿ ಅಂಟಿಸಿದ್ದು, ಇದನ್ನು ನೋಡಿದ ಸಾರ್ವಜನಿಕರು ಮಹಿಳಾ ಪ್ರಾದ್ಯಾಪಕಿಗೆ ಕರೆ ಮಾಡಿ ಅಶ್ಲೀಲವಾಗಿ ಮಾನಹಾನಿಕರವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದರು. ಆರೋಪಿಗಳ ಪೈಕಿ ಪ್ರದೀಪ್ ಪೂಜಾರಿ ಎಂಬವರ ವಿರುದ್ಧ ಈ ಹಿಂದೆ 2019 ನೇ ಇಸವಿಯಲ್ಲಿ ಕಾಲೇಜ್ ಪ್ರಾಧ್ಯಾಪಕಿಯೊಬ್ಬರಿಗೆ ಮಾನಹಾನಿಗೆ ಯತ್ನಿಸಿದ ಪ್ರಕರಣ ದಾಖಲಾಗಿರುತ್ತದೆ.

ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರುಗಳ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳಿಂದ 3 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

5 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

5 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

5 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

6 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

6 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

6 hours ago