Featured

ಮಂಗಳೂರು : ಸಾವರ್ಕರ್‌ ಅವರನ್ನು ಬಿಜೆಪಿ ಒಪ್ಪುವುದಾದರೆ ಅವರ ಜನ್ಮ ದಿನವನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸುವ ತಾಕತ್ತು ಇದೆಯೇ ? ಹಿಂದೂ ಮಹಾಸಭಾ  – Vishwanews24

ಅಧಿಕಾರ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಸಾವರ್ಕರ್ ಹೆಸರು ಬಳಸುತ್ತಿದೆ ..

ಜಾತಿಯ ಹೆಸರಿನಲ್ಲಿ ದೇಶವನ್ನು ಸಂಘಟಿಸಿದ ಬಿಜೆಪಿ ನಾಯಕರಿಗೆ ಸಾವರ್ಕರ್ ಹೆಸರು ಎತ್ತುವ ನೈತಿಕತೆ ಇಲ್ಲ..

ಬಿಜೆಪಿ ವಿರುದ್ಧ ಹಿಂದೂ ಮಹಾಸಭಾ ಆಕ್ರೋಶ

ಮಂಗಳೂರು: ‘ಜಾತಿಯ ಹೆಸರಿನಲ್ಲಿ ದೇಶವನ್ನು ಸಂಘಟಿಸಿದ ಬಿಜೆಪಿ ನಾಯಕರಿಗೆ ಸಾವರ್ಕರ್ ಹೆಸರು ಎತ್ತುವ ನೈತಿಕತೆ ಇಲ್ಲ. ಕಾಂಗ್ರೆಸ್‌ಗಿಂತಲೂ ಹೀನಾಯವಾಗಿ ಧರ್ಮವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡಿದ್ದು, ಅಧಿಕಾರ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಸಾವರ್ಕರ್ ಹೆಸರು ಬಳಸುತ್ತಿದೆ’ ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ವಾರ್ಥ ರಾಜಕೀಯ ಮಾಡುವ ಬಿಜೆಪಿ ನಾಯಕರು ಆತ್ಮವಿಮರ್ಶೆ ಮಾಡಿಕೊಂಡು ನಂತರ ಸಾವರ್ಕರ್ ಬಗ್ಗೆ ಧ್ವನಿ ಎತ್ತಲಿ. ಸಾವರ್ಕರ್ ಕಟ್ಟಿದ ಅಖಿಲ ಭಾರತ ಹಿಂದೂ ಮಹಾಸಭಾ ಆಗಲಿ, ಅವರ ಅಖಂಡ ಭಾರತದ ಪರಿಕಲ್ಪನೆಯಾಗಲಿ, ಹಿಂದುತ್ವ ವಿಚಾರಧಾರೆಯಾಗಲಿ ಬಿಜೆಪಿಗೆ ಬೇಕಾಗಿಲ್ಲ. ಮುಂಬರುವ ಚುನಾವಣೆಗೆ ಸಾವರ್ಕರ್ ಹೆಸರು ಮತ್ತು ಭಾವಚಿತ್ರ ಮಾತ್ರ ಬೇಕಾಗಿದೆ. ಇದು ಬಿಜೆಪಿಯ ದಿವಾಳಿತನವನ್ನು ತೋರಿಸುತ್ತದೆ’ ಎಂದರು.

ಸಾವರ್ಕರ್‌ ಅವರನ್ನು ಬಿಜೆಪಿ ಒಪ್ಪುವುದಾದರೆ ಅವರ ಜನ್ಮ ದಿನವನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸುವ ತಾಕತ್ತು ಇದೆಯೇ ಎಂದು ಸವಾಲೆಸೆದರು.
ಸಾವರ್ಕರ್ ವಿರೋಧಿ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಪುಕ್ಕಲು ಸ್ವಭಾವದವರು. ಗಾಂಧೀಜಿ ಹೇಗೆ ಭಾರತ ವಿಭಜನೆಗೆ ಕಾರಣರಾದರೋ ಹಾಗೆಯೇ ಸಿದ್ದರಾಮಯ್ಯ ಮುಸ್ಲಿಂ ‘ಏರಿಯಾ– ಹಿಂದೂ ಏರಿಯಾ’ ಎಂದು ವಿಭಜಿಸುವ ಮೂಲಕ ದೇಶವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ವಿರುದ್ಧ ದಾಖಲೆಗಳನ್ನು ಸಂಗ್ರಹಿಸಿ ಪ್ರಕರಣ ದಾಖಲಿಸಲು ಯೋಚಿಸಲಾಗಿದೆ ಎಂದು ಹೇಳಿದರು.

ಕಾಶ್ಮೀರ: ಗುಂಡಿನ ದಾಳಿ ವೇಳೆ ಗಾಯಗೊಂಡ ಪಾಕ್ ಉಗ್ರನಿಗೆ ರಕ್ತದಾನ ಮಾಡಿ ಜೀವ ಉಳಿಸಿದ ಭಾರತೀಯ ಸೈನಿಕರು – Vishwanews24

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

19 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

20 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

20 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

20 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

20 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

21 hours ago