ಮಂಗಳೂರು : ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಎಸ್ ಸಿ ಅಗ್ರಿಕಲ್ಚರ್ ನಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಕಾಲೇಜಿನ ವರುಣ್ ಗೌಡ ಪ್ರಥಮ ಸ್ಥಾನ ಪಡೆದಿದ್ದಾರೆ. ಜೂನ್ 30ರಂದು ನಡೆದಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು ಘೋಷಣೆಯಾಗಿದೆ. ಇಂಜಿನಿಯರಿಂಗ್ ವಿಭಾಗದಲ್ಲಿ ನಾಲ್ಕನೇ ಸ್ಥಾನವನ್ನು ಎಕ್ಸ್‌ಪರ್ಟ್ ಕಾಲೇಜಿನ ಶಶಾಂಕ್. ಪಿ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿಸಿಎಂ ಡಾ ಅಶ್ವಥ್ ನಾರಾಯಣ್, ಈ ವರ್ಷ ಪರೀಕ್ಷೆ ನಡೆದು 21ನೇ ದಿನಕ್ಕೆ ಪರೀಕ್ಷಾ ಫಲಿತಾಂಶ ನೀಡಿದ್ದೇವೆ . ಕರ್ನಾಟಕ ಪರೀಕ್ಷಾ ಮಂಡಳಿ ಕೆಸಿಇಟಿ 2020 ಫಲಿತಾಂಶವನ್ನು ಕೆಇಎ ಅಧಿಕೃತ ವೆಬ್ಸೈಟ್ cetonline.karnataka.gov.in/kea ನಲ್ಲಿ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.
ಸಿಇಟಿ ಪರೀಕ್ಷೆಯು ಜು.30ರಿಂದ ಆಗಸ್ಟ್ 1ರವರೆಗೆ ನಡೆದಿದ್ದು, ಒಟ್ಟು 1.94 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರ ಫಲಿತಾಂಶದ ಆಧಾರದಲ್ಲಿ ಇಂಜಿನಿಯರಿಂಗ್, ಕೃಷಿ, ಪಶು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಸರ್ಕಾರಿ ಕೋಟಾ ಸೀಟು ಹಂಚಿಕೆಯಾಗಲಿದೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…