Featured

ಮಂಗಳೂರು : ಸಿಎಂ ಭೇಟಿಯಾದ ಐಕಳ ಹರೀಶ್ ಶೆಟ್ಟಿ ; ಬೇಡಿಕೆ ಈಡೇರಿಸುವುದಾಗಿ ಭರವಸೆ – Vishwanews24

ಸಮುದಾಯದ ಹೋರಾಟಕ್ಕೆ ಒಂದು ಹಂತದ ಜಯ ದೊರಕಿದೆ : ಐಕಳ ಹರೀಶ್ ಶೆಟ್ಟಿ

ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಚೇರಿಗೆ ಕರೆಸಿ ಬಂಟ ಸಮುದಾಯದ ಎಲ್ಲಾ ವಿಚಾರಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದರು.

ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ ಈ ಸಂದರ್ಭ ಉಪಸ್ಥಿತರಿದ್ದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನ ಮತ್ತು ಇತರ ಯೋಜನೆಗಳಿಗೆ ಸರಕಾರದ ಅನುದಾನವನ್ನೂ ಬಿಡುಗಡೆಗೊಳಿಸಿದರು.

ಬಂಟ ಸಮುದಾಯವನ್ನು 2A ಕೆಟಗರಿಗೆ ಸೇರಿಸುವ ಬಗ್ಗೆ ಆಶ್ವಾಸನೆಯನ್ನು ನೀಡಿ, ಬಂಟರ ಯಾನೆ ನಾಡವರ ಎಲ್ಲಾ ಆಶೋತ್ತರಗಳನ್ನು ಈಡೇರಿಸುವುದಾಗಿ ಒಕ್ಕೂಟದ ಅಧ್ಯಕ್ಷರಿಗೆ ಭರವಸೆಯನ್ನು ನೀಡುವ ಮೂಲಕ ಸಮುದಾಯದ ಹೋರಾಟಕ್ಕೆ ಒಂದು ಹಂತದ ಜಯ ದೊರಕಿದೆ ಎಂದು ಐಕಳ ಹರೀಶ್ ಶೆಟ್ಟಿ ಪತಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದಿನಾಂಕ 07.03.2023 ರಂದು ಮುಖ್ಯಮಂತ್ರಿಗಳ ನಿವಾಸದಲ್ಲಿ ತಡರಾತ್ರಿ 11 ಗಂಟೆಗೆ ಐಕಳ ಹರೀಶ್ ಶೆಟ್ಟಿ ಯವರ ಜೊತೆ ನಡೆಸಿದ ವಿಸ್ತೃತವಾದ ಮಾತುಕತೆಯ ನಡೆಸಿ ಐಕಳ ಅವರು ಬಂಟ ಸಮಾಜದ ಎಲ್ಲಾ ವಿಚಾರಗಳನ್ನು ಮನದಟ್ಟು ಮಾಡುವ ಮೂಲಕ ಬಂಟ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಯ ಅವಶ್ಯಕತೆ ಮನಗಂಡು ಅವರು ಬಂಟ ನಾಡವರ ನಿಗಮ ಸ್ಥಾಪನೆಗೆ ತನ್ನ ಒಪ್ಪಿಗೆ ನೀಡಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಬಲವನ್ನು ತುಂಬಿದ್ದಾರೆ.

ಈ ಮೂಲಕ ಇಡೀ ಬಂಟ ಸಮುದಾಯಕ್ಕೆ ಮುಂದಿನ ದಿನಗಳಲ್ಲಿ ಸಹಕಾರಿಯಾಗಲಿದೆ ಮಾನ್ಯ ಮುಖ್ಯಮಂತ್ರಿಗಳ ಸಹಕಾರದಿಂದ ಸಮುದಾಯದ ಪರವಾಗಿ ಒಕ್ಕೂಟದ ಅಧ್ಯಕ್ಷರ ಹೋರಾಟಕ್ಕೆ ಸಂದ ಜಯವಾಗಿದೆ.

ಈ ಐತಿಹಾಸಿಕ ಕ್ಷಣಕ್ಕೆ ಕಾರಣಕರ್ತರಾದ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಮುಂಬೈ ಸಂಸದ ಗೋಪಾಲ್ ಶೆಟ್ಟಿ, ಜಗತ್ತಿನ ಎಲ್ಲಾ ಬಂಟರ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು, ಎಲ್ಲಾ ಬಂಟರ ಮುಖಂಡರುಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

5 minutes ago

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

14 minutes ago

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

24 minutes ago

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

13 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

18 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

19 hours ago