ಮಂಗಳೂರು: ಸಿಟಿ ಬಸ್‌ನಲ್ಲಿ ತುಳು ಲಿಪಿ -Vishwanews24

ಮಂಗಳೂರು : ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂಬುದಕ್ಕೆ ಬೆಂಬಲ ನೀಡಿ ಸಿಟಿ ಬಸ್‌ನಲ್ಲಿ ತುಳು ಲಿಪಿ ಹಾಕಲಾಗಿದೆ. ಬಸ್‌ನಲ್ಲಿಯೂ ತುಳು ಲಿಪಿ ಪ್ರೀತಿ ವ್ಯಕ್ತವಾಗಿದ್ದು ಈ ಬಸ್‌ ಈಗ ಎಲ್ಲರ ಗಮನ ಸೆಳೆದಿದೆ.

ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣದಿಂದ ಅತ್ತಾವರ ಮಾರ್ಗವಾಗಿ ಮಂಗಳಾದೇವಿಗೆ ತೆರಳುವ ಗಣೇಶ್‌ ಪ್ರಸಾದ್‌ (ರೂಟ್‌ ನಂ:27) ಎಂಬ ಹೆಸರಿರುವ ಈ ಬಸ್‌ನ ಮಾಲಿಕರು ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್‌ ಆಳ್ವ ಅವರು.

ಈ ಬಸ್‌ಗೆ ಇತ್ತೀಚೆಗೆ ಪೈಂಟಿಂಗ್‌ ಮಾಡಲಾಗಿದ್ದು ಆ ಸಮಯದಲ್ಲಿ ಬಸ್‌ನ ಎರಡೂ ಬದಿಗಳಲ್ಲಿ ಬಸ್‌ನ ಹೆಸರು ಅಥವಾ ರೂಟ್‌ ಬರೆಯುವ ಬದಲಿಗೆ ತುಳು ಲಿಪಿ ಅ ದಿಂದ ಅಃ ವರೆಗೆ ಬರೆದಿದ್ದು, ಪಕ್ಕದಲ್ಲಿಯೇ ಹ್ಯಾಶ್‌ ಟ್ಯಾಗ್‌ ಮುಖೇನ #TuluTo8thSchedule #TuluofficiallnKA_KL ಎಂದು ಬರೆಯಲಾಗಿದೆ.

ದಿಲ್‌ ರಾಜ್‌ ಆಳ್ವ ಅವರ ಮಾಲಕತ್ವದಲ್ಲಿ ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣದಿಂದ ಅತ್ತಾವರ ಮುಖೇನ ಮಂಗಳಾದೇವಿಗೆ ತೆರಳುವ ಐದು ಬಸ್‌ಗಳಿದ್ದು ಈ ಮೊದಲೇ ಆ ಬಸ್‌ಗಳಿಗೆ ವಿಶೇಷ ರೀತಿಯಲ್ಲಿ ಪೈಟಿಂಗ್‌ ಮಾಡಿದ್ದಾರೆ.

ಈ ಬಸ್‌ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫೇಮಸ್‌ ಆಗಿದ್ದು ಮಂಗಳೂರಿನ ಜನತೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

37 minutes ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

45 minutes ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

56 minutes ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 day ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 day ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

1 day ago