Featured

ಮಂಗಳೂರು : ಸಿಟಿ ಬಸ್ ನಲ್ಲಿ ಭಾವಚಿತ್ರ ಬಿಡಿಸುವ ಮೂಲಕ ಭಾರತೀಯ ಸೈನ್ಯ ಹಾಗೂ ಧೀರ ಯೋಧ ಅಭಿನಂದನ್ ಗೆ ವಿಭಿನ್ನ ಗೌರವ – Vishwanews24

ಮಂಗಳೂರು : ಪಾಕಿಸ್ತಾನದ ಎಫ್ -16 ಯುದ್ದ ವಿಮಾನವನ್ನು ಹೊಡೆದುರುಳಿಸಿದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್.. ಈ ಹೆಸರು ಈಗ ದೇಶದ ಮೂಲೆ ಮೂಲೆಯಲ್ಲೂ ಕೇಳಿ ಬರುತ್ತಿದೆ. ಅಲ್ಲದೇ ವೀರ ಯೋಧನ ಸಾಹಸವನ್ನ ಎಲ್ಲೆಡೆ ಕೊಂಡಾಡಲಾಗುತ್ತಿದೆ. ಜೊತೆಗೆ ವಿವಿಧೆಡೆ ಅಭಿನಂದನ್​ಗೆ ವಿಭಿನ್ನವಾಗಿ ಗೌರವ ಸಲ್ಲಿಸಲಾಗುತ್ತಿದೆ. ಅದರಂತೆ ಮಂಗಳೂರಿನಲ್ಲಿ ಖಾಸಗಿ ಬಸ್ ನಲ್ಲಿ ಅಭಿನಂದನ್ ಅವರ ಬಾವಚಿತ್ರವನ್ನು ಬಿಡಿಸಿ ಭಾರತೀಯ ಸೇನೆ ಹಾಗೂ ಅಭಿನಂದನ್ ಅವರಿಗೆ ಗೌರವ ಸಲ್ಲಿಸಲಾಗುತ್ತಿದೆ.

ಪಾಕಿಸ್ಥಾನದ ಅತ್ಯಾಧುನಿಕ ಯುದ್ದ ವಿಮಾನ ಎಫ್ 16 ಅನ್ನು ಹೊಡೆದುರುಳಿಸಿದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ ದೇಶದಾದ್ಯಂತ ಗೌರವ ಸಲ್ಲಿಸಲಾಗುತ್ತಿದೆ. ಹಾಗೆಯೆ ಮಂಗಳೂರಿನ ಖಾಸಗಿ ಸರ್ವಿಸ್ ಬಸ್ ವಿಭಿನ್ನ ರೀತಿಯಲ್ಲಿ ವಿಂಗ್ ಕಮಾಂಡರ್ ಅಭಿನಂದನ್ ಗೆ ಗೌರವ ಸಲ್ಲಿಸುತ್ತಿದೆ.

ಸೈಂಟ್ ಆಂಟೋನಿ ಎಂಬ ಹೆಸರಿನ ರೂಟ್ ನಂ 14D ಬಸ್ ಇದಾಗಿದ್ದು ಮಂಗಳಾದೇವಿ – ಕಾವೂರು ರೂಟ್ ನಲ್ಲಿ ಈ ಬಸ್ ಸಂಚರಿಸುತ್ತದೆ.

ಈ ಬಸ್ ಗೆ ವಿಂಗ್ ಕಮಾಂಡರ್ ಅಭಿನಂದನ್ ಅವರ ಬಾವ ಚಿತ್ರ ಬಿಡಿಸಿ ಅದರಲ್ಲಿ ” We Salute Indian Army ” ಎಂದು ಬರೆಯುವ ಮೂಲಕ ಭಾರತೀಯ ಸೇನೆಗೆ ಗೌರವ ಸಲ್ಲಿಸಲಾಗಿದೆ.

ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ 40ಕ್ಕೂ ಹೆಚ್ಚು ಸಿಆರ್‍ಪಿಎಫ್ ಯೋಧರು ಫೆಬ್ರವರಿ 14ರಂದು ಹುತಾತ್ಮರಾಗಿದ್ದರು. ಉಗ್ರರಿಗೆ ತಕ್ಕ ಪಾಠ ಕಲಿಸಲು ಭಾರತೀಯ ವಾಯು ಪಡೆಯು ಉಗ್ರರ ಮೂರು ನೆಲೆಗಳ ಫೆಬ್ರವರಿ 26ರಂದು ಏರ್ ಸ್ಟ್ರೈಕ್ ನಡೆಸಿ ಉಗ್ರರನ್ನು ನಾಶಗೊಳಿಸಿತ್ತು.

ನಂತರದ ದಿನ (ಫೆ.27ರಂದು) ಪಾಕಿಸ್ತಾನ ವಾಯು ಪಡೆಯ ಯುದ್ಧ ವಿಮಾನಗಳು ಗಡಿಯನ್ನು ದಾಟಿಬಂದು ಹಾರಾಟ ನಡೆಸಿದ್ದವು. ಈ ವೇಳೆ ಪಾಕಿಸ್ತಾನದ ಎಫ್ 16 ಯುದ್ಧ ವಿಮಾನವನ್ನು ಭಾರತೀಯ ಪೈಲಟ್ ಅಭಿನಂದನ್ ಅವರು ಹೊಡೆದುರುಳಿಸಿದ್ದರು. ಈ ಹೋರಾಟದಲ್ಲಿ ತಮ್ಮ ಮಿಗ್ 21 ವಿಮಾನಕ್ಕೆ ಹಾನಿಯುಂಟಾದ ಹಿನ್ನಲೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದ ಅವರು, ಪ್ಯಾರಾಚೂಟ್ ಸಹಾಯದಿಂದ ಕೆಳಗೆ ಹಾರಿದ್ದರು. ಆದರೆ ಅಭಿನಂದನ್ ಅವರು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬಿದ್ದಿದ್ದು, ಬಂಧನಕ್ಕೆ ಒಳಗಾಗಿದ್ದರು. ನಂತರ ಭಾರತದ ರಾಜತಾಂತ್ರಿಕ ಎಚ್ಚರಿಕೆಗೆ ಮಣಿದ ಪಾಕಿಸ್ತಾನ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಿಡುಗಡೆಗೊಳಿಸಿತ್ತು.

ಪಾಕ್ ಸೈನ್ಯದ ಕೈಯಲ್ಲಿ ಬಂಧನಕ್ಕೊಳಗಾದ ಸಂದರ್ಭದಲ್ಲಿ ಭಾರತದ ಸೇನಾ ರಹಸ್ಯಗಳನ್ನು ಅರಿಯಲು ಪಾಕ್ ಅಭಿನಂದನ್ ಅವರಿಗೆ ಮಾನಸಿಕ ಹಾಗೂ ದೈಹಿಕ ಚಿತ್ರ ಹಿಂಸೆಯನ್ನು ನೀಡಿತ್ತು. ಆ ಹಿಂಸೆಗಳನ್ನೆಲ್ಲಾ ಸಹಿಸಿದ ಅಭಿನಂದನ್ ಅವರು ಯಾವುದೇ ಒಂದು ರಹಸ್ಯವನ್ನು ಪಾಕ್ ಸೇನೆಯ ಮುಂದೆ ಬಿಚ್ಚಿಟ್ಟಿಲ್ಲ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago