ಮಂಗಳೂರು: ಸಿದ್ದರಾಮಯ್ಯನವರೆ, ಹಿಂದೂಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಯ್ಯೊ ಸಿದ್ದರಾಮಯ್ಯನವರೆ, ಹಿಂದೂಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ. ಎಸ್ ಡಿಪಿಐ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆದವರು ಯಾರು ಎಂಬುದು ಹಿಂದುಗಳು ಮರೆತಿಲ್ಲ. ನೀವು ಜಾತಿ- ಧರ್ಮಗಳ ಹೆಸರಿನಲ್ಲಿ ಜನರನ್ನು ಒಡೆದು ಆಳಲು ಪ್ರಯತ್ನಿಸಿದ್ದು ಗುಟ್ಟಾಗೇನೂ ಉಳಿದಿಲ್ಲ ಎಂದಿದ್ದಾರೆ.
ಹಿಂದು ಧರ್ಮಕ್ಕೆ ಸೇರಿರುವ ಮಂಗಳೂರಿನ ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುವಿರಾ? ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯಕೊಡಿಸುತ್ತೀರಿ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಕೇಳಿದ್ದರು.
ಬುದ್ದಿವಂತರ ಜಿಲ್ಲೆ ಎಂಬ ದಕ್ಷಿಣಕನ್ನಡ ದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು, ನಳಿನ್ ಕುಮಾರ್ ಕಟೀಲ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರಬಹುದು, ಇಲ್ಲವೇ ಪಕ್ಷದಲ್ಲಿ ಈ ಮಟ್ಟದ ಬೌದ್ದಿಕ ದಾರಿದ್ರ್ಯ ಇದ್ದಿರಬಹುದು ಎಂದಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…