Featured

ಮಂಗಳೂರು : ಸಿದ್ದರಾಮಯ್ಯನವರು ಸಂಘಟನೆ ಕಾರ್ಯಗಳಿಗೆ ಕೈ ಹಾಕಿದ್ರೆ ನಾವು ಉತ್ತರ ಕೊಡ್ತೇವೆ : ನಳಿನ್ ಕಟೀಲ್ – Vishwanews24

ಸಿದ್ದರಾಮಯ್ಯನವರು ಸಂಘಟನೆ ಕಾರ್ಯಗಳಿಗೆ ಕೈ ಹಾಕಿದ್ರೆ ನಾವು ಉತ್ತರ ಕೊಡ್ತೇವೆ : ನಳಿನ್ ಕಟೀಲ್

ಮಂಗಳೂರು: ಸಾಂವಿಧಾನಾತ್ಮಕವಾಗಿ ಎಲ್ಲಾ ಇಲಾಖೆಗಳಲ್ಲೂ ಪ್ರತೀ ನಾಗರಿಕನಿಗೂ ಅವನ ಧರ್ಮದ ಅನುಷ್ಠಾನದ ಹಕ್ಕಿದೆ. ಹತ್ತಾರು ವರ್ಷಗಳಿಂದ ಎಲ್ಲಾ ಇಲಾಖೆಗಳಲ್ಲೂ ಧಾರ್ಮಿಕ ಆಧಾರದಲ್ಲಿ ಪೂಜೆಗಳು ನಡಿಯುತ್ತಿದೆ. ಆಯುಧ ಪೂಜೆ, ಶಿಲಾನ್ಯಾಸಗಳ ಸಮಯದಲ್ಲಿ ಸಂಪ್ರದಾಯಬದ್ದವಾಗಿ ನಡೆದಿದೆ. ಇವತ್ತು ಇದನ್ನ ತಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡ್ತಾ ಇದೆ. ಕಾಂಗ್ರೆಸ್ ನ ಹೀನಾ ರಾಜಕಾರಣ ಮತ್ತು ಸಿದ್ದರಾಮಯ್ಯ ಮಾನಸೀಕತೆ ಬಯಲಾಗಿದೆ. ಒಬ್ಬ ಮುಖ್ಯಮಂತ್ರಿ ಸಾಂವಿಧಾನಿಕವಾಗಿ ಆತನ ಧಾರ್ಮಿಕ ಆಚರಣೆಗೆ ಅಡ್ಡಿ ಬರೋದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಹಿಂದಿನಿಂದ ನಡೆದುಕೊಂಡು ಬಂದ ಪೂಜೆಗಳನ್ನು ಕೆಲವು ಇಲಾಖೆಗಳಲ್ಲಿ ಮಾಡುತ್ತಾರೆ. ನಂಬಿಕೆಗಳ ಆಧಾರದಲ್ಲಿ ಕೆಎಸ್ಸಾರ್ಟಿಸಿ, ಪೊಲೀಸ್ ಠಾಣೆಗಳಲ್ಲಿ ಆಯುಧ ಪೂಜೆ ಮಾಡುತ್ತಾರೆ ಹಾಗಾಗಿ ಈ ಪೂಜೆಗಳನ್ನು ನಿಷೇಧಿಸುವ, ಬಹಿಷ್ಕಾರ ಹಾಕುವ ಕ್ರಮ ಸರಿಯಲ್ಲ. ಪೂಜೆ ಮಾಡುವ ಪೊಲೀಸರನ್ನ ಒಂದು ಪಾರ್ಟಿಗೆ ಸೀಮಿತ ಮಾಡುವ ಹೀನ ರಾಜಕಾರಣ ಕಾಂಗ್ರೆಸ್ ನಿಂದ ಆಗ್ತಿದೆ ಎಂದರು.

ಇನ್ನು ನೈತಿಕ ಪೊಲೀಸ್ ಗಿರಿ ವಿಚಾರದಲ್ಲಿ ಭಜರಂಗದಳ ನಿಷೇಧವನ್ನು ಉಲ್ಲೇಖ ಮಾಡ್ತಾ ಇದ್ದಾರೆ. ಇದು ಕಾಂಗ್ರೆಸ್ ಹಿಂದೂ ಸಮಾಜದ ಮೇಲೆ ಹೇಗೆ ಸವಾರಿ ಮಾಡುತ್ತೆ ಅನ್ನೋದನ್ನ ತೋರಿಸಿದೆ. ಹಿಂದೂ ಆಚರಣೆ ಹಾಗೂ ರಾಷ್ಟ್ರ ಭಕ್ತ ಕಾರ್ಯಕರ್ತರ ಮೇಲೆ ಹೇಗೆ ಸವಾರಿ ಮಾಡುತ್ತೆ ಅನ್ನದನ್ನು ತೋರಿಸಿದೆ. ಇಂಥದ್ದರ ವಿರುದ್ದ ಹೋರಾಟ ಮಾಡಿ ಉತ್ತರ ಕೊಡೋ ಶಕ್ತಿ ಬಿಜೆಪಿಗಿದೆ ಎಂದಿದ್ದಾರೆ.

ಸಿದ್ದರಾಮಯ್ಯ ಮತ್ತು‌ ಕಾಂಗ್ರೆಸ್ ನ ಮಾನಸಿಕತೆಯನ್ನ ವಿರೋಧಿಸ್ತೇನೆ. ಸಂಘಟನೆ ಕಾರ್ಯಗಳಿಗೆ ಕೈ ಹಾಕಿದ್ರೆ ನಾವು ಉತ್ತರ ಕೊಡ್ತೇವೆ. ಎಲ್ಲಾ ಇಲಾಖೆಗಳಲ್ಲೂ ರಾಜಕಾರಣ ಮಾಡುವ ಕೆಲಸಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಅಧಿಕಾರಿಗಳನ್ನ ಕಂಟ್ರೋಲ್ ಮಾಡಿ ಕಾಂಗ್ರೆಸ್ ಅಜೆಂಡಾ ಹೇರುವ ಕೆಲಸ ಮಾಡ್ತಿದೆ. ಹಿಂದಿನ ಎಲ್ಲಾ ಜಿಲ್ಲಾಧಿಕಾರಿಗಳು ಒಳ್ಳೆಯ ಕೆಲಸ ಮಾಡಿ ರಾಜ್ಯ ಅಭಿವೃದ್ಧಿ ಆಗಿದೆ. ಇವತ್ತು ಅಂಥಹ ಅಧಿಕಾರಿಗಳನ್ನು ಬೆದರಿಸುವ ತಂತ್ರಗಾರಿಕೆ ಸಿದ್ದರಾಮಯ್ಯ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ತನ್ನ ಹಿಂದೂ ವಿರೋಧಿ ನೀತಿಯನ್ನ ಪ್ರಕಟಿಸಿಯೇ ಪ್ರಕಟಿಸುತ್ತೆ. ನಾವು ಹೋರಾಟದ ಮೂಲಕ ಕಾಂಗ್ರೆಸ್ ಗೆ ಉತ್ತರ ಕೊಡ್ತೇವೆ. ನಾವು ಹಿಂದೂಗಳ ಪರವಾಗಿದ್ದೇವೆ, ಗೋಹತ್ಯೆ ನಿಷೇಧ, ಮತಾಂತರ ನಿಷೇಧದ ಪರವಾಗಿದ್ದೇವೆ. ಹಿಂದೂ ಸಮಾಜಕ್ಕೆ ತೊಂದರೆಯಾದ್ರೆ ಬಿಜೆಪಿ ಹೋರಾಟ ಮಾಡಲಿದೆ. ಕಾಂಗ್ರೆಸ್ ಗೆ ಬಹುಮತ ಕೊಟ್ಟರೂ ಗಲಾಟೆ ಮಾಡ್ತಾ ಇದ್ದಾರೆ. ಇವರು ಸರ್ಕಾರ ಬರುವ ಮೊದಲೇ ಜಗಳ ಮಾಡಿಕೊಂಡು ಬಂದವರು. ಜನಾಶೀರ್ವಾದ ಸಿಕ್ಕರೂ ಇವರ ಬೀದಿ ಜಗಳ ಜೋರಾಗಿದೆ. ಇನ್ನೂ ಮಂತ್ರಿ ಮಂಡಲ ರಚನೆ ಆಗಿಲ್ಲ, ಇದು ರಚನೆ ಆದ್ರೆ ಕಾಂಗ್ರೆಸ್ ನ ಸ್ಥಿತಿ ಏನಾಗುತ್ತೆ ಕಾದು ನೋಡಿ. ನಮ್ಮ 40% ಕಮಿಷನ್ ವಿರುದ್ದ ಇವರು ತನಿಖೆ ಮಾಡಲಿ. ಜೊತೆಗೆ ಸಿದ್ದರಾಮಯ್ಯ ವಿರುದ್ದ ನಾವು ಲೋಕಾಯುಕ್ತಕ್ಕೆ ಕೊಟ್ಟ ದೂರಿನ ತನಿಖೆಯೂ ಆಗಲಿ ಎಂದು ಹೇಳಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago