ಮಂಗಳೂರು : ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಅನಿಸುತ್ತಿದೆ : ನಳೀನ್ ಕುಮಾರ್ ಕಟೀಲ್ -Vishwanews24

Featured, ರಾಜ್ಯ ನ್ಯೂಸ್

ಮಂಗಳೂರು : ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಅನಿಸುತ್ತಿದೆ : ನಳೀನ್ ಕುಮಾರ್ ಕಟೀಲ್ -Vishwanews24

ಮಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಅನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಎಂದು ಅನಿಸುತ್ತಿದೆ. ಸಿದ್ದರಾಮಯ್ಯ ಅತಂತ್ರ ಸ್ಥಿತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಸಿದ್ದರಾಮಯ್ಯ ತಾಲಿಬಾನ್ ಸಂಸ್ಕೃತಿ ಹೊಂದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅತೀ ಹೆಚ್ಚು ಹತ್ಯೆಗಳು ನಡೆದಿವೆ. ಕೊಲೆ,ಸುಲಿಗೆ, ಗೋಹತ್ಯೆ ಅವರ ಕಾಲದಲ್ಲೇ ಹೆಚ್ಚು ನಡೆದಿವೆ. 24 ಕ್ಕೂ ಹೆಚ್ಚು ಹಿಂದೂಗಳ ಹತ್ಯೆ ಆಗಿದ್ದು, ಅವರ ಸರ್ಕಾರದಲ್ಲೇ ಅವರಿಗೆ ನಮ್ಮ ಬಗ್ಗೆ ಕೇಳುವ ನೈತಿಕತೆ ಇಲ್ಲ ಎಂದು ಹೇಳಿದ್ದಾರೆ.

 

ಬೆಳ್ತಂಗಡಿ : ಎಂ.ಕಾಂ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ -Vishwanews24