ಮಂಗಳೂರು: ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿ ಕಾರ್ಯ ನಿರ್ವಹಿಸಿ ತಮ್ಮ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿದ ಸಿ.ಟಿ. ರವಿ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‍ಸಾರ್ ಅವರು ವಿಶೇಷವಾಗಿ ಗೌರವಿಸಿದರು.
ಬೆಂಗಳೂರಿನ ಕಲಾ ಗ್ರಾಮದ ಸಭಾಂಗಣದಲ್ಲಿ ನಡೆದ ಈ ಸಮಾರಂಭದಲ್ಲಿ ಮಾತನಾಡಿದ ದಯಾನಂದ ಜಿ. ಕತ್ತಲ್‍ಸಾರ್, “ಸಚಿವ ಸ್ಥಾನಕ್ಕೆ ನ್ಯಾಯ ಒದಗಿಸಿ, ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜ್ಯದ ಎಲ್ಲಾ ಅಕಾಡೆಮಿಗಳನ್ನು ವಿಶ್ವಾಸಕ್ಕೆ ಪಡೆದುಕೊಂಡು ಕಾರ್ಯ ನಿರ್ವಹಿಸಿದ್ದು ಶ್ಲಾಘನೀಯ. ರಾಜ್ಯದ ಸಂಸ್ಕೃತಿ ಸಂಸ್ಕಾರಗಳನ್ನು ಪ್ರತಿಬಿಂಬಿಸಲು ನಮ್ಮೆಲ್ಲರನ್ನು ಹುರಿದುಂಬಿಸಿ ಪ್ರೋತ್ಸಾಹಿಸಿ, ಅವರ ಸ್ಥಾನಕ್ಕೊಂದು ನ್ಯಾಯ ಒದಗಿಸಿದ ಅಪರೂಪದ ಸಚಿವರಾಗಿದ್ದಾರೆ. ರಾಜ್ಯದ ಸಾಂಸ್ಕೃತಿಕ ಲೋಕಕ್ಕೆ ತಮ್ಮದೇ ಆದ ವಿಶೇಷ ಕೊಡುಗೆ ನೀಡಿರುವುದು ವಿಶೇಷ” ಎಂದು ಹೇಳಿದರು.
“ಸಚಿವರಾಗಿ ಸ್ಥಾನಮಾನ ಪಡೆದಿದ್ದ ಸಿ.ಟಿ.ರವಿ ಅವರು ಯಾವುದೇ ಕೆಲಸಕ್ಕೂ ನಾನಿದ್ದೇನೆ ನೀವು ಮುಂದುವರಿಯರಿ ಅಧ್ಯಕ್ಷರೇ ಎಂದು ನೈತಿಕ ಸ್ಥೈರ್ಯ ತುಂಬಿದವರು” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಿ.ಟಿ. ರವಿ ಅವರನ್ನು ತುಳುನಾಡಿನ ಪರಂಪರೆಯ ಮುಟ್ಟಾಳೆ, ರೇಷ್ಮೆ ಶಾಲು, ಸಹಿತ ತುಳುನಾಡನ್ನು ಪ್ರತಿಬಿಂಬಿಸುವ ವಿಶೇಷ ಕಲಾಕೃತಿಯನ್ನು ನೀಡಿ ಸಾರ್ವತ್ರಿಕವಾಗಿ ಗೌರವಿಸಲಾಯಿತು.
ಈ ವೇಳೆ ಅಕಾಡೆಮಿಯ ಸದಸ್ಯರಾದ ಚೇತಕ್ ಪೂಜಾರಿ ಮಂಗಳೂರು, ನರೇಂದ್ರ ಎಂ. ಪೂಜಾರಿ ಉಪಸ್ಥಿತರಿದ್ದರು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…