ಮಂಗಳೂರು: ಸಿ.ಟಿ.ರವಿಗೆ ತುಳು ಅಕಾಡೆಮಿಯಿಂದ ವಿಶೇಷ ಗೌರವಾರ್ಪಣೆ -Vishwanews24

ಮಂಗಳೂರು: ಸಿ.ಟಿ.ರವಿಗೆ ತುಳು ಅಕಾಡೆಮಿಯಿಂದ ವಿಶೇಷ ಗೌರವಾರ್ಪಣೆ -Vishwanews24

ಮಂಗಳೂರು: ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿ ಕಾರ್ಯ ನಿರ್ವಹಿಸಿ ತಮ್ಮ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿದ ಸಿ.ಟಿ. ರವಿ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‍ಸಾರ್ ಅವರು ವಿಶೇಷವಾಗಿ ಗೌರವಿಸಿದರು.

ಬೆಂಗಳೂರಿನ ಕಲಾ ಗ್ರಾಮದ ಸಭಾಂಗಣದಲ್ಲಿ ನಡೆದ ಈ ಸಮಾರಂಭದಲ್ಲಿ ಮಾತನಾಡಿದ ದಯಾನಂದ ಜಿ. ಕತ್ತಲ್‍ಸಾರ್, “ಸಚಿವ ಸ್ಥಾನಕ್ಕೆ ನ್ಯಾಯ ಒದಗಿಸಿ, ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜ್ಯದ ಎಲ್ಲಾ ಅಕಾಡೆಮಿಗಳನ್ನು ವಿಶ್ವಾಸಕ್ಕೆ ಪಡೆದುಕೊಂಡು ಕಾರ್ಯ ನಿರ್ವಹಿಸಿದ್ದು ಶ್ಲಾಘನೀಯ. ರಾಜ್ಯದ ಸಂಸ್ಕೃತಿ ಸಂಸ್ಕಾರಗಳನ್ನು ಪ್ರತಿಬಿಂಬಿಸಲು ನಮ್ಮೆಲ್ಲರನ್ನು ಹುರಿದುಂಬಿಸಿ ಪ್ರೋತ್ಸಾಹಿಸಿ, ಅವರ ಸ್ಥಾನಕ್ಕೊಂದು ನ್ಯಾಯ ಒದಗಿಸಿದ ಅಪರೂಪದ ಸಚಿವರಾಗಿದ್ದಾರೆ. ರಾಜ್ಯದ ಸಾಂಸ್ಕೃತಿಕ ಲೋಕಕ್ಕೆ ತಮ್ಮದೇ ಆದ ವಿಶೇಷ ಕೊಡುಗೆ ನೀಡಿರುವುದು ವಿಶೇಷ” ಎಂದು ಹೇಳಿದರು.

“ಸಚಿವರಾಗಿ ಸ್ಥಾನಮಾನ ಪಡೆದಿದ್ದ ಸಿ.ಟಿ.ರವಿ ಅವರು ಯಾವುದೇ ಕೆಲಸಕ್ಕೂ ನಾನಿದ್ದೇನೆ ನೀವು ಮುಂದುವರಿಯರಿ ಅಧ್ಯಕ್ಷರೇ ಎಂದು ನೈತಿಕ ಸ್ಥೈರ್ಯ ತುಂಬಿದವರು” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಿ.ಟಿ. ರವಿ ಅವರನ್ನು ತುಳುನಾಡಿನ ಪರಂಪರೆಯ ಮುಟ್ಟಾಳೆ, ರೇಷ್ಮೆ ಶಾಲು, ಸಹಿತ ತುಳುನಾಡನ್ನು ಪ್ರತಿಬಿಂಬಿಸುವ ವಿಶೇಷ ಕಲಾಕೃತಿಯನ್ನು ನೀಡಿ ಸಾರ್ವತ್ರಿಕವಾಗಿ ಗೌರವಿಸಲಾಯಿತು.

ಈ ವೇಳೆ ಅಕಾಡೆಮಿಯ ಸದಸ್ಯರಾದ ಚೇತಕ್ ಪೂಜಾರಿ ಮಂಗಳೂರು, ನರೇಂದ್ರ ಎಂ. ಪೂಜಾರಿ ಉಪಸ್ಥಿತರಿದ್ದರು.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

34 minutes ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

48 minutes ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

53 minutes ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

1 hour ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago