ಮಂಗಳೂರು: ನಗರದ ಬೈಕಂಪಾಡಿ ಕೈಗಾರಿಕಾ ಪ್ರಾಂಗಣದಲ್ಲಿರುವ ಸೀಫುಡ್ ತಯಾರಿಕಾ ಘಟಕದಲ್ಲಿ ಮಂಗಳವಾರ ವಿಷಾನಿಲ ಅಮೋನಿಯಂ ಸೋರಿಕೆಯಾದ ಘಟನೆ ನಡೆದಿದೆ. ಈ ಘಟನೆಯಲ್ಲಿ ಒಟ್ಟು 26 ಮಂದಿ ಅಸ್ವಸ್ಥರಾಗಿದ್ದಾರೆ.
ಮಂಗಳವಾರ ಮಧ್ಯಾಹ್ನ ವೇಳೆಗೆ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಅಸ್ವಸ್ಥರಾಗಿದ್ದ 26 ಸಿಬ್ಬಂದಿಗಳನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಕೆಲವರು ಬಿಡುಗಡೆಯಾಗಿದ್ದು, ಇನ್ನುಳಿದವರಿಗೆ ಚಿಕಿತ್ಸೆ ಮುಂದುವರಿದಿದೆ.
ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಎವರೆಸ್ಟ್ ಸೀ ಫುಡ್ಸ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯಲ್ಲಿ ಈ ಅವಘಡ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪಣಂಬೂರು ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭೇಟಿ ಬಳಿಕ ಮಾಧ್ಯಮಗಳ ಜತೆ ಮಾತನಾಡಿರುವ ಅವರು ಘಟನೆಯ ವಿವರ ನೀಡಿದ್ದು, ವಿಷಾನಿಲ ಸೋರಿಕೆ ಪ್ರಕರಣದಲ್ಲಿ ಎವರೆಸ್ಟ್ ಸೀ ಫುಡ್ಸ್ ಪ್ರೈವೇಟ್ ಲಿಮಿಟೆಡ್‌ನ 26 ಸಿಬ್ಬಂದಿ ಅಸ್ವಸ್ಥರಾಗಿದ್ದರು. ಇವರಲ್ಲಿ 10 ಮಂದಿ ಪ್ರಾಥಮಿಕ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದ 16 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…