ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಾದ್ಯಂತ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಮಧ್ಯರಾತ್ರಿ ಉಂಟಾದ ಭೀಕರ ಶಬ್ಧ ಮತ್ತು ಕಂಪನದಿಂದ ಜನತೆ ಭೀತಿಗೊಂಡಿದ್ದು, ಎಚ್ಚರಗೊಂಡಿದ್ದಾರೆ.
ಒಂದೇ ವಾರದಲ್ಲಿ 4ನೇ ಬಾರಿ ಭೂಕಂಪನದ ಅನುಭವವಾಗಿದೆ. ರಾತ್ರಿ 1.15 ರ ವೇಳೆಗೆ ಭಾರಿ ಶಬ್ಧದೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಸಂಪಾಜೆ ಹಾಗು ಸಮೀಪದ ಪ್ರದೇಶ, ಸುಳ್ಯ ನಗರ ಸೇರಿ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಭೂ ಕಂಪನದ ಆಗಿರುವ ಬಗ್ಗೆ ಜನರು ದೂರವಾಣಿಯ ಮೂಲಕ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಅನುಭವ ಹಂಚಿಕೊಂಡಿದ್ದಾರೆ.
ಗುತ್ತಿಗಾರು, ತೊಡಿಕಾನ, ಉಬರಡ್ಕ, ಅರಂತೋಡು, ಸಂಪಾಜೆ ಸೇರಿದಂತೆ ಎಲ್ಲಾ ಕಡೆ ಭೂಮಿ ಕಂಪಿಸಿದೆ. ಇದೀಗ ವಾರದಲ್ಲಿ ನಾಲ್ಕನೇ ಬಾರಿ ಭೂ ಕಂಪನ ಉಂಟಾಗಿದ್ದು, ಜನರ ಆತಂಕ ಹೆಚ್ಚಿಸಿದೆ. ಜೂ.25 ರಂದು ಬೆಳಿಗ್ಗೆ 9.10 ಕ್ಕೆ 2.3 ತೀವ್ರತೆಯ ಭೂ ಕಂಪನ ಆಗಿತ್ತು. ಜೂ.28 ರಂದು ಎರಡು ಬಾರಿ ಭೂಮಿ ನಲುಗಿತ್ತು. ಬೆಳಗ್ಗೆ ರಿಕ್ಟರ್ ಸ್ಕೇಲ್‌ನಲ್ಲಿ 3 ತೀವ್ರತೆಯ ಹಾಗು ಸಂಜೆ 1.8 ತೀವ್ರತೆಯ ಕಂಪನ ಉಂಟಾಗಿತ್ತು.
ನಿರಂತರವಾಗಿ ಭೂಕಂಪನವಾಗುತ್ತಿರುವುದು ಹಾಗೂ ಭಾರಿ ಮಳೆ ಕೂಡ ಆಗುತ್ತಿರುವುದರಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಸಂಪಾಜೆಯಲ್ಲಿ ಕೆಲವರು ಮನೆಯಿಂದ ಹೊರಗೋಡಿ ಬಂದಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…