Featured

ಮಂಗಳೂರು :  ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಆರೋಪಿಗಳು NIA ವಶಕ್ಕೆ – vishwanews24

ಮಂಗಳೂರು :  ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಆರೋಪಿಗಳು NIA ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (NIA) ಕಸ್ಟಡಿಗೆ ನೀಡಿದೆ.

ಪ್ರಕರಣ ಸಂಬಂಧ ಎನ್‌ಐಎ ಪ್ರತ್ಯೇಕವಾಗಿ ಎಫ್​ಐಆರ್ ದಾಖಲಿಸಿದೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಎನ್‌ಐಎ ಎಸ್​ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಬೆಂಗಳೂರಿನ 50ನೇ ಸಿಸಿಹೆಚ್ ನ್ಯಾಯಾಲಯ ಜುಲೈ 1ರವರೆಗೆ ಆರೋಪಿಗಳನ್ನು ಎನ್‌ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರಿಗೆ ಮನವಿ ಸಲ್ಲಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾ‌ನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದರು.

ಸುಹಾಸ್ ಶೆಟ್ಟಿ ಕೊಲೆಗೆ ಮೂರು ತಿಂಗಳ ಹಿಂದೆಯೇ ಸಂಚು ಹೂಡಲಾಗಿತ್ತು. ಜನವರಿಯಲ್ಲೇ ಸಫ್ವಾನ್ ತಂಡಕ್ಕೆ ಫಾಜಿಲ್ (ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಹತ್ಯೆಗೊಳಗಾಗಿದ್ದ ಯುವಕ) ತಮ್ಮ ಆದಿಲ್ 3 ಲಕ್ಷ ರೂಪಾಯಿ ಹಣ ಕೊಟ್ಟಿದ್ದ. ಕೃತ್ಯಕ್ಕಾಗಿ ಒಂದು ಪಿಕ್ ಅಪ್ ವಾಹನ, ಸ್ವಿಫ್ಟ್ ಕಾರ್ ಬಳಕೆ ಮಾಡಿದ್ದ. ಅಕಸ್ಮಾತ್ ಸುಹಾಸ್ ಶೆಟ್ಟಿ ತಪ್ಪಿಸಿಕೊಂಡರೆ ಪ್ಲಾನ್ ಬಿಯನ್ನೂ ರೆಡಿ ಮಾಡಿಕೊಳ್ಳಲಾಗಿತ್ತು ಎಂಬುದು ತಿಳಿದುಬಂದಿದೆ.

ಸುಹಾಸ್ ಶೆಟ್ಟಿ ಚಲನ ವಲನಗಳ ಮೇಲೆ ಪ್ರಮುಖ ಆರೋಪಿ ಸಫ್ವಾನ್ 15 ದಿನಗಳಿಂದ ಗಮನ ಇರಿಸಿದ್ದ. ಹುಡುಗರನ್ನು ಬಿಟ್ಟು ರೇಖಿ ಮಾಡಿಸಿದ್ದನು. ಚಿಕ್ಕಮಗಳೂರಿನ ಕಳಸಾದ ರಂಜಿತ್ ಹಾಗೂ ನಾಗರಾಜ್ 15 ದಿನಗಳಿಂದ ಸಫ್ವಾನ್ ಮನೆಯಲ್ಲೇ ಇದ್ದರು. ಸುಹಾಸ್ ಶೆಟ್ಟಿ ಬಜ್ಪೆಗೆ ಬರುವ ಬಗ್ಗೆ ಅಝರುದ್ಧಿನ್ ಮಾಹಿತಿ ನೀಡಿದ್ದನು. ಎಷ್ಟು ಗಂಟೆಗೆ ಸುಹಾಸ್ ಹೊರಡುತ್ತಾನೆ, ಅವನೊಂದಿಗೆ ಯಾರಿದ್ದಾರೆ ಎಂಬುದನ್ನು ಸಫ್ವಾನ್​​ಗೆ ಮಾಹಿತಿ ನೀಡಿದ್ದನು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

10 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago