ಮಂಗಳೂರು : ಮಂಗಳೂರು ರೈಲು ನಿಲ್ದಾಣದಲ್ಲಿ 4 ಮತ್ತು 5ನೇ ಪ್ಲಾಟ್ಫಾರಂ ಸೆಪ್ಟಂಬರ್ ವೇಳೆಗೆ ಸಿದ್ಧಗೊಂಡು ರೈಲು ಸಂಚಾರಕ್ಕೆ ಲಭ್ಯವಾಗಲಿದೆ ಎಂದು ದಕ್ಷಿಣ ರೈಲ್ವೇ ಮಹಾಪ್ರಬಂಧಕ ಜಾನ್ ಥಾಮಸ್ ಹೇಳಿದ್ದಾರೆ.
ರೈಲ್ವೇ ವ್ಯವಸ್ಥೆ ಹಾಗೂ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾನ್ ಥಾಮಸ್, “ಮಂಗಳೂರು ಸೆಂಟ್ರಲ್ನಲ್ಲಿ ಪಿಟ್ಲೆನ್ ಕಾಮಗಾರಿ ಪ್ರಗತಿಯಲ್ಲಿದ್ದು ಮುಂದಿನ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದೆ. ಇದಾದ ಬಳಿಕ ಹೊಸ ಪ್ಲಾಟ್ಫಾರಂಗಳ ಕಾಮಗಾರಿಯನ್ನು ಕೈಗೆತ್ತಿಕೊಂಡು ಆರು ತಿಂಗಳಿನಲ್ಲಿ ಪೂರ್ಣಗೊಳಿಸಲಾಗುವುದು. ಇದರ ನಿರ್ಮಾಣಕ್ಕೆ ಅನುದಾನ ಈಗಾಗಲೇ ಬಿಡುಗಡೆಯಾಗಿದ್ದು ಗುತ್ತಿಗೆ ಪ್ರಕ್ರಿಯೆ ಕೂಡ ನಡೆದಿದೆ “ಎಂದರು.
ಇನ್ನು ಹೆಚ್ಚುವರಿ ಪ್ಲಾಟ್ಫಾರಂಗಳ ನಿರ್ಮಾಣ ದಿಂದ ಜಿಲ್ಲೆಯ ಜನರ ಬೇಡಿಕೆಗೆ ಅನು ಗುಣವಾಗಿ ಹೆಚ್ಚಿನ ಸಂಖ್ಯೆಯಲ್ಲಿ ರೈಲು ಗಳನ್ನು ಓಡಿಸಲು ಅನುಕೂಲವಾಗಲಿದ್ದು, ರೈಲ್ವೇ ವಿಭಾಗೀಯ ಪ್ರಬಂಧಕ ತ್ರಿಲೋಕ್ ಕೊಠಾರಿ, ರೈಲ್ವೇ ಬಳಕೆದಾರರ ಸಲಹಾ ಸಮಿತಿಯ ಸದಸ್ಯರಾದ ಹನುಮಂತ ಕಾಮತ್, ಅಹ್ಮದ್ ಬಾವ, ಪಶ್ಚಿಮ ಕರಾವಳಿ ರೈಲ್ವೇ ಯಾತ್ರಿ ಅಭಿವೃದ್ಧಿ ಸಮಿತಿಯ ಅನಿಲ್ ಹೆಗ್ಡೆ, ಜಿ.ಕೆ. ಭಟ್ ಉಪಸ್ಥಿತರಿದ್ದರು.
ಮಂಗಳೂರು ಭಾಗದ ವಿವಿಧ ಬೇಡಿಕೆ ಗಳ ಬಗ್ಗೆ ಪಶ್ಚಿಮ ಕರಾವಳಿ ರೈಲ್ವೇ ಯಾತ್ರಿ ಅಭಿವೃದ್ಧಿ ಸಮಿತಿ ಸದಸ್ಯರು, ಜಿ.ಎಂ. ಜಾನ್ ಥಾಮಸ್ ಅವರಿಗೆ ಮನವಿ ಸಲ್ಲಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…