Featured

ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣ: 4 ಮತ್ತು 5ನೇ ಪ್ಲಾಟ್‌ಫಾರಂ ಸೆಪ್ಟಂಬರ್‌ ವೇಳೆಗೆ ಸಿದ್ಧ – Vishwanews24

ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣ: 4 ಮತ್ತು 5ನೇ ಪ್ಲಾಟ್‌ಫಾರಂ ಸೆಪ್ಟಂಬರ್‌ ವೇಳೆಗೆ ಸಿದ್ಧ – Vishwanews24

ಮಂಗಳೂರು : ಮಂಗಳೂರು ರೈಲು ನಿಲ್ದಾಣದಲ್ಲಿ 4 ಮತ್ತು 5ನೇ ಪ್ಲಾಟ್‌ಫಾರಂ ಸೆಪ್ಟಂಬರ್‌ ವೇಳೆಗೆ ಸಿದ್ಧಗೊಂಡು ರೈಲು ಸಂಚಾರಕ್ಕೆ ಲಭ್ಯವಾಗಲಿದೆ ಎಂದು ದಕ್ಷಿಣ ರೈಲ್ವೇ ಮಹಾಪ್ರಬಂಧಕ ಜಾನ್‌ ಥಾಮಸ್‌ ಹೇಳಿದ್ದಾರೆ.

ರೈಲ್ವೇ ವ್ಯವಸ್ಥೆ ಹಾಗೂ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾನ್‌ ಥಾಮಸ್‌, “ಮಂಗಳೂರು ಸೆಂಟ್ರಲ್‌ನಲ್ಲಿ ಪಿಟ್‌ಲೆನ್‌ ಕಾಮಗಾರಿ ಪ್ರಗತಿಯಲ್ಲಿದ್ದು ಮುಂದಿನ ಮಾರ್ಚ್‌ ವೇಳೆಗೆ ಪೂರ್ಣಗೊಳ್ಳಲಿದೆ. ಇದಾದ ಬಳಿಕ ಹೊಸ ಪ್ಲಾಟ್‌ಫಾರಂಗಳ ಕಾಮಗಾರಿಯನ್ನು ಕೈಗೆತ್ತಿಕೊಂಡು ಆರು ತಿಂಗಳಿನಲ್ಲಿ ಪೂರ್ಣಗೊಳಿಸಲಾಗುವುದು. ಇದರ ನಿರ್ಮಾಣಕ್ಕೆ ಅನುದಾನ ಈಗಾಗಲೇ ಬಿಡುಗಡೆಯಾಗಿದ್ದು ಗುತ್ತಿಗೆ ಪ್ರಕ್ರಿಯೆ ಕೂಡ ನಡೆದಿದೆ “ಎಂದರು.

ಇನ್ನು ಹೆಚ್ಚುವರಿ ಪ್ಲಾಟ್‌ಫಾರಂಗಳ ನಿರ್ಮಾಣ ದಿಂದ ಜಿಲ್ಲೆಯ ಜನರ ಬೇಡಿಕೆಗೆ ಅನು ಗುಣವಾಗಿ ಹೆಚ್ಚಿನ ಸಂಖ್ಯೆಯಲ್ಲಿ ರೈಲು ಗಳನ್ನು ಓಡಿಸಲು ಅನುಕೂಲವಾಗಲಿದ್ದು, ರೈಲ್ವೇ ವಿಭಾಗೀಯ ಪ್ರಬಂಧಕ ತ್ರಿಲೋಕ್‌ ಕೊಠಾರಿ, ರೈಲ್ವೇ ಬಳಕೆದಾರರ ಸಲಹಾ ಸಮಿತಿಯ ಸದಸ್ಯರಾದ ಹನುಮಂತ ಕಾಮತ್‌, ಅಹ್ಮದ್‌ ಬಾವ, ಪಶ್ಚಿಮ ಕರಾವಳಿ ರೈಲ್ವೇ ಯಾತ್ರಿ ಅಭಿವೃದ್ಧಿ ಸಮಿತಿಯ ಅನಿಲ್‌ ಹೆಗ್ಡೆ, ಜಿ.ಕೆ. ಭಟ್‌ ಉಪಸ್ಥಿತರಿದ್ದರು.

ಮಂಗಳೂರು ಭಾಗದ ವಿವಿಧ ಬೇಡಿಕೆ ಗಳ ಬಗ್ಗೆ ಪಶ್ಚಿಮ ಕರಾವಳಿ ರೈಲ್ವೇ ಯಾತ್ರಿ ಅಭಿವೃದ್ಧಿ ಸಮಿತಿ ಸದಸ್ಯರು, ಜಿ.ಎಂ. ಜಾನ್‌ ಥಾಮಸ್‌ ಅವರಿಗೆ ಮನವಿ ಸಲ್ಲಿಸಿದರು.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

18 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago