ಮಂಗಳೂರು : ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ 2 ತಿಂಗಳಲ್ಲಿ ರೂಪುರೇಷೆ ತಯಾರಿಸಿ ಕ್ರಮ ವಹಿಸಲಾಗುವುದು ಎಂದು ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.
ರೈಲ್ವೆ ಅಭಿವೃದ್ದಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲು ಬುಧವಾರ ಮಂಗಳೂರಿಗೆ ಆಗಮಿಸಿರುವ ವಿ. ಸೋಮಣ್ಣ ಅವರು, ಮಂಗಳೂರು ಸೆಂಟ್ರಲ್ ನಿಲ್ದಾಣಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.
ಕಳೆದ ಸುಮಾರು 40 ವರ್ಷಗಳಿಂದ ಮಂಗಳೂರಿನಲ್ಲಿ ರೈಲ್ವೇ ಆಭಿವೃದ್ಧಿ ನೆನೆಗುದಿಗೆ ಬಿದ್ದಿದ್ದು, ಇದಕ್ಕೆ ಕಾಯಕಲ್ಪ ನೀಡುವ ನಿಟ್ಟನಲ್ಲಿ ಕ್ರಮ ವಹಿಸಲಾಗುವುದು. ತಮಿಳುನಾಡು, ಕೇರಳ ಮತ್ತು ಗೋವಾ, ಮಹಾರಾಷ್ಟ್ರ ನಡುವೆ ಮಂಗಳೂರು , ಕಾರವಾರ ಭಾಗದಲ್ಲಿ ರೈಲ್ವೇ ಅಭಿವೃದ್ಧಿ ಕಾರ್ಯಗಳು ನಿರೀಕ್ಷಿತ ರೀತಿ ಆಗಿಲ್ಲ. ಈ ನಿಟ್ಟಿನಲ್ಲಿ ಎರಡು ತಿಂಗಳೊಳಗೆ ತಜ್ಞರು, ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಒಗ್ಗೂಡಿಸಿಕೊಂಡು ನೀಲನಕ್ಷೆ ತಯಾರಿಸಲಾಗುವುದು ಎಂದರು.
ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಸಚಿವರಿಗೆ ಮಂಗಳೂರು ರೈಲ್ವೇ ಆಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…