ಮಂಗಳೂರು : ಬಹುದಿನಗಳ ಬೇಡಿಕೆಯಾಗಿರುವ ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲುಗಳ ಸಂಚಾರ ಸೋಮವಾರ ಬೆಳಗ್ಗೆ ಆರಂಭಗೊಂಡಿದೆ.
ವಿದ್ಯುತ್‌ಚಾಲಿತ ಪ್ರಯಾಣಿಕ ರೈಲು ಸಂಚಾರ ಆರಂಭದೊಂದಿಗೆ ಭವಿಷ್ಯದಲ್ಲಿ ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಓಡಾಟಕ್ಕೆ ಸಹಕಾರಿಯಾಗುವುದನ್ನು ನಿರೀಕ್ಷಿಸಲಾಗಿದೆ.
ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ರೈಲು (ನಂ. 56625/26, 56627/28 ಮತ್ತು 56629/30) ಆರಂಭಗೊಳ್ಳುವುದರೊಂದಿಗೆ ಈ ಭಾಗದ ಪ್ರಯಾಣಿಕರ ಬಹುಕಾಲದ ಕನಸು ನನಸಾಗಿದೆ.
ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರೈಲು ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ ಯೋಜನೆ ಪೂರ್ಣ ಗೊಂಡು ಇದೀಗ ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ನಡುವೆ ವಿದ್ಯುತ್‌ಚಾಲಿತ ರೈಲುಗಳ ಓಡಾಟ ಆರಂಭ ಗೊಂಡಿದೆ. ಸೆ.11 ರಂದು ವಿದ್ಯುತ್‌ಚಾಲಿತ ರೈಲು ಇಂಜಿನ್‌ನ ಪ್ರಾಯೋಗಿಕ ಪರೀಕ್ಷೆ ನಡೆದು ಅಧಿಕೃತ ಆರಂಭಕ್ಕೆ ದಿನ ನಿಗದಿಯಾಗಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…