Featured

ಮಂಗಳೂರು: ಸೆ. 2ರಂದು ನಗರ ಕಮೀಷನರೇಟ್‌ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ – Vishwanews24

ಮಂಗಳೂರು: ಸೆ. 2ರಂದು ನಗರ ಕಮೀಷನರೇಟ್‌ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ಮಂಗಳೂರು ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಎಲ್ಲಾ ಶಾಲಾ – ಕಾಲೇಜುಗಳಿಗೆ ಸೆ. 2ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶಿದ್ದಾರೆ.

ಸೆ.2 ರಂದು ಮಂಗಳೂರು ನಗರದ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಗಣಪತಿ ವಿಗ್ರಹದ ವಿಸರ್ಜನೆಯ ಶೋಭಾಯಾತ್ರೆ ಕಾರ್ಯಕ್ರಮಗಳು ನಡೆಯುವುದರಿಂದ, ಈ ಸಮಯದಲ್ಲಿ ಹಚ್ಚಿನ ಜನದಟ್ಟಣೆ ಹಾಗೂ ವಾಹನ ದಟ್ಟಣೆ ಜಾಸ್ತಿಯಾಗುವ ಸಂಭವವಿರುತ್ತದೆ ಎಂದು ಪೊಲೀಸ್‌ ಇಲಾಖೆಯ ಮಾಹಿತಿಯಂತೆ ತಿಳಿದುಬಂದಿದೆ.

ಇನ್ನುಂದೆ ಉಡುಪಿ ನಗರಸಭೆ ಬ್ರೋಕರ್ ಗಳಿಗೆ ನೋ ಎಂಟ್ರಿ: ರಘುಪತಿ ಖಡಕ್ ವಾರ್ನಿಂಗ್ – Vishwnaews24

ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆಗಳಿರುವುದರಿಂದ ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಸ್ನಾತಕೊತ್ತರ ಪದವಿ, ಡಿಪ್ಲೋಮ, ಐ.ಟಿ.ಐ.ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಸೆ. 2 ರಂದು ರಜೆಯನ್ನು ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಸ್ತುತ ನೀಡಿರುವ ರಜೆ ಅವದಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಂಡು ನಿರ್ವಹಿಸುವಂತೆ ತಿಳಿಸಲಾಗಿದೆ.

ಇದಲ್ಲದೆ ಸೆ. 2ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 1.00ಕ್ಕೆ ಮಂಗಳೂರಿನಲ್ಲಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. ಅಲ್ಲದೆ ನಗರದ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸಮಾವೇಶ ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ,.

ಭಟ್ಕಳ : ಅಲೆಗಳ ಅಬ್ಬರಕ್ಕೆ ಸಿಲುಕಿ ಮೀನುಗಾರಿಕಾ ದೋಣಿ ಮುಳುಗಡೆ: ಓರ್ವ ನಾಪತ್ತೆ; ಇಬ್ಬರ ರಕ್ಷಣೆ – Vishwanews24

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

21 hours ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

21 hours ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

22 hours ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

22 hours ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

23 hours ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

24 hours ago