ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕೃತಿಗೆ ಮುಸ್ಲಿಮ್ ಲೇಖಕರ ಸಂಘವು ಕೊಡಮಾಡುವ 2019ನೇ ಸಾಲಿನ ರಾಜ್ಯ ಮಟ್ಟದ ದಿವಂಗತ ಯು.ಟಿ. ಫರೀದ್ ಸ್ಮರಣಾರ್ಥ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ ಮತ್ತು ಬಹುಭಾಷಾ ಕವಿಗೋಷ್ಠಿ ಸೆ.3ರಂದು ಸಂಜೆ 4.30ಕ್ಕೆ ನಡೆಯಲಿದೆ.
ನಗರದ ಸ್ಟೇಟ್ ಬ್ಯಾಂಕ್, ರಾವ್ ಆಂಡ್ ರಾವ್ ಸರ್ಕಲ್ ಬಳಿಯ ಸಹಕಾರಿ ಸಧನದಲ್ಲಿರುವ ಶಾಂತಿ ಪ್ರಕಾಶನ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಸಕ ಯು.ಟಿ. ಖಾದರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ದಿವಂಗತ ಮುಮ್ತಾಜ್ ಬೇಗಮ್’ರವರ (ಕೃತಿ: ‘ಸ್ವಾತಂತ್ರ್ಯದ ಕಹಳೆ’) ಕುಟುಂಬಸ್ಥರು ಪ್ರಶಸ್ತಿ ಸ್ವೀಕರಿಸಲಿದ್ದು, ಗಣಪತಿ ಪ.ಪೂ. ಕಾಲೇಜಿನ ವಿಶ್ರಾಂತ ಪ್ರಾಂಶುಪಾಲೆ ಚಂದ್ರಕಲಾ ನಂದಾವರ ಪ್ರಮುಖ ಭಾಷಣ ಮಾಡಲಿದ್ದಾರೆ.
ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಹೆಚ್. ಅಧ್ಯಕ್ಷತೆ ವಹಿಸಲಿದ್ದು, ಬಹುಭಾಷಾ ಕವಿ ಮುಹಮ್ಮದ್ ಬಡ್ಡೂರು ಕವಿಗೋಷ್ಠಿ ಉದ್ಘಾಟಿಸಲಿದ್ದಾರೆ. ಪ್ರಶಾಂತಿ ಶೆಟ್ಟಿ ಇರುವೈಲು, ರೇಮಂಡ್ ಡಿ’ ಕುನ್ಹ, ಸಿಹಾನ ಬಿ.ಎಂ. ಹಾಗೂ ಮೌl ಇಮ್ರಾನುಲ್ಲಾ ಖಾನ್ ಮನ್ಸೂರಿ ಕವನ ಮಂಡಿಸಲಿದ್ದಾರೆ ಎಂದು ಸಂಘದ ಪ್ರ. ಕಾರ್ಯದರ್ಶಿ ಬಿ.ಎ.ಮುಹಮ್ಮದ್ ಅಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…