ಮಂಗಳೂರು: ಸೆ.6ರಿಂದ 9ರವರೆಗೆ ಜಿಲ್ಲಾದ್ಯಂತ ನಾಲ್ಕು ದಿನ ಬಾರ್ ಬಂದ್ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಸೆ.6ರಿಂದ 9ರವರೆಗೆ ಜಿಲ್ಲಾದ್ಯಂತ ನಾಲ್ಕು ದಿನ ಬಾರ್ ಬಂದ್

ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ಜಿಲ್ಲೆಯಾದ್ಯಂತ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯಲಿದೆ.

ಈ ವೇಳೆ ಸಾವಿರಾರು ಜನ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಾಗವಹಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು ಅಧಿಕವಿರಲಿದ್ದಾರೆ. ಹಾಗಾಗಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕಗಳಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವೈನ್‌ಶಾಪ್/ಬಾರ್‌ಗಳನ್ನು ಮುಚ್ಚಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಚಿಕ್ಕಮಗಳೂರು ಹಿಟ್ & ರನ್ ಕೇಸ್ – ಕುಡಿದು ಬೈಕ್ ಸವಾರನೇ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ: ಕಾಮಿಡಿ ನಟ ಚಂದ್ರಪ್ರಭಾ – Vishwanews24

Leave a Reply