Featured

ಮಂಗಳೂರು ಸೇರಿ ಐದು ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ಪಡೆದುಕೊಂಡ ಅದಾನಿ ಕಂಪನಿ – Vishwanews24

ನವದೆಹಲಿ: ಗುಜರಾತ್ ಮೂಲದ ಗೌತಮ್ ಅದಾನಿ ಒಡೆತನದ ಅದಾನಿ ಗ್ರೂಪ್ ಈಗ ಅಧಿಕೃತವಾಗಿ ವಿಮಾನಯಾನ ಕ್ಷೇತ್ರಕ್ಕೆ ಕಾಲಿಟ್ಟಿದ್ದು, ಮಂಗಳೂರು ಸೇರಿದಂತೆ ದೇಶದ ಐದು ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ಅದಾನಿ ಕಂಪನಿ ಪಡೆದುಕೊಂಡಿದೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(ಎಎಐ)ದ ವ್ಯಾಪ್ತಿಯಲ್ಲಿ ಬರುವ ಒಟ್ಟು 6 ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಸೋಮವಾರ ಹರಾಜು ಪ್ರಕ್ರಿಯೆ ನಡೆಯಿತು. ಈ ಹರಾಜು ಪ್ರಕ್ರಿಯೆಯಲ್ಲಿ ಅತಿ ಹೆಚ್ಚು ಬಿಡ್ ಮಾಡಿದ ಅದಾನಿ ಕಂಪನಿ ಮಂಗಳೂರು, ಅಹಮದಾಬಾದ್, ಜೈಪುರ, ತಿರುವನಂತಪುರಂ, ಲಖನೌ ವಿಮಾನ ನಿಲ್ದಾಣವನ್ನು ಪಡೆದುಕೊಂಡಿದೆ.
ದೇಶದ ಆರು ವಿಮಾನ ನಿಲ್ದಾಣಗಳನ್ನು ಖಾಸಗಿ ನಿರ್ವಹಣೆಗೆ ನೀಡುವುದಕ್ಕೆ ಕೇಂದ್ರ ಸರ್ಕಾರ ಟೆಂಡರ್‌ ಆಹ್ವಾನಿಸಿತ್ತು. ಅದರಲ್ಲಿ ಐದು ವಿಮಾನ ನಿಲ್ದಾಣಗಳ ಗುತ್ತಿಗೆಯನ್ನು ಅದಾನಿ ಗ್ರೂಪ್‌ ಗೆದ್ದುಕೊಂಡಿದೆ. ಅವು – ಅಹಮದಾಬಾದ್‌, ತಿರುವನಂತಪುರಂ, ಲಖನೌ, ಮಂಗಳೂರು ಮತ್ತು ಜೈಪುರ ವಿಮಾನ ನಿಲ್ದಾಣ. ಇನ್ನೊಂದು ವಿಮಾನ ನಿಲ್ದಾಣವಾದ ಗುವಾಹಟಿ ಏರ್‌ಪೋರ್ಟ್‌ನ ಟೆಂಡರ್‌ ಮಂಗಳವಾರ ಅಂತಿಮಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇದೀಗ ಬಿಡ್ಡಿಂಗ್‌ ಗೆದ್ದ ಅದಾನಿ ಕಂಪನಿ, ಮುಂದಿನ 50 ವರ್ಷಗಳ ಕಾಲ ಈ 5 ವಿಮಾನ ನಿಲ್ದಾಣಗಳ ನಿರ್ವಹಣೆ ಮಾಡಲಿದೆ.
ಅದಾನಿ ಕಂಪನಿಗೆ ಬೆಂಗಳೂರು ಮೂಲದ ಜಿಎಂಆರ್ ಗ್ರೂಪ್ ಪ್ರಬಲ ಪೈಪೋಟಿಯನ್ನು ನೀಡಿತ್ತು. ಆದರೆ ಅದಾನಿ ಕಂಪನಿ ಅತಿ ಹೆಚ್ಚು ಮೊತ್ತದ ಬಿಡ್ ಸಲ್ಲಿಸಿದ ಕಾರಣ 6ರ ಪೈಕಿ 5 ನಿಲ್ದಾಣವನ್ನು ತೆಕ್ಕೆಗೆ ಪಡೆಯುವಲ್ಲಿ ಯಶಸ್ವಿಯಾಗಿದೆ.
Vishwa News 24

Recent Posts

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ – vishwanews24

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…

12 hours ago

ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ – vishwanews24

ಖರ್ಗೆ ಅವರು  ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…

13 hours ago

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

14 hours ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

14 hours ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

14 hours ago

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

14 hours ago