ಮಂಗಳೂರು: ಕಾರು ಅಪಘಾತಕ್ಕೀಡಾಗಿ ಅಡ್ಯಾರ್ ಬಾಳಿಕೆ ಮನೆ ನಿವಾಸಿ ಕೊರಗಪ್ಪ ಸಾಲ್ಯಾನ್ (65) ಎಂಬವರು ಮೃತಪಟ್ಟಿರುವ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮುಂಭಾಗ ಡಿ. 4 ರಂದು ಸಂಜೆ ವೇಳೆ ಸಂಭವಿಸಿದೆ.
ಅಡ್ಯಾರ್ ಗಾರ್ಡನ್ ಎದುರುಗಡೆಯ ಸಂತೋಷ್ ಹೇರ್ ಡ್ರೆಸ್ಸರ್ಸ್ ಎಂಬ ಸೆಲೂನಿನ ಮಾಲಕರಾಗಿದ್ದ ಇವರು ಸೈಕಲ್ ಮೂಲಕ ರಸ್ತೆ ದಾಟುವಾಗ ಬಿ.ಸಿ.ರೋಡ್ ಕಡೆಯಿಂದ ಅಮಿತ ವೇಗದಲ್ಲಿ ಬಂದ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ದೂರಕ್ಕೆ ಎಸೆಯಲ್ಪಟ್ಟು, ತಲೆಗೆ ಗಂಭೀರ ರೀತಿಯಲ್ಲಿ ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಮೃತರು ಯುವ ವಯಸ್ಸಿನಲ್ಲಿ ಕಬ್ಬಡ್ಡಿ ಆಟಗಾರರೂ ಹಾಗೂ ತಾಲೀಮಿನಲ್ಲಿ ಸಕ್ರಿಯವಾಗಿ ತನ್ನನ್ನು ತಾನು ತೊಡಗಿಸಿಕೊಂಡಿದ್ದವರು. ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕ ಬೆಳ್ತಂಗಡಿಯ ಮಹಮ್ಮದ್ ಆಶೀಕ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…