ಮಂಗಳೂರು: ಯುವತಿಯರನ್ನು ನಂಬಿಸಿ, ಅತ್ಯಾಚಾರ ಮಾಡಿ ಸೈನೈಡ್ ಬಳಸಿ ಕೊಲೆ ಮಾಡಿದ್ದ ಸರಣಿ ಹಂತಕ ಸೈನೈಡ್ ಮೋಹನ್‌ಗೆ 16ನೇ ಪ್ರಕರಣದಲ್ಲಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.
ಕೊಲೆ ಕೃತ್ಯಕ್ಕಾಗಿ ಸೆಕ್ಷನ್ 302 ಅಡಿಯಲ್ಲಿ ಜೀವಾವಧಿ ಹಾಗೂ 25 ಸಾವಿರ ರೂ. ದಂಡ, ವಿಷ ಉಣಿಸಿದ ಕೃತ್ಯಕ್ಕಾಗಿ ಸೆಕ್ಷನ್ 328 ಅಡಿಯಲ್ಲಿ 10 ವರ್ಷ ಕಠಿಣ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ, ಚಿನ್ನಾಭರಣ ಸುಲಿಗೆ ಪ್ರಕರಣದಲ್ಲಿ ಸೆಕ್ಷನ್ 392 ಕೃತ್ಯಕ್ಕೆ 5 ವರ್ಷ ಕಠಿಣ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ, ವಂಚನೆ ನಡೆಸಿದ್ದಕ್ಕಾಗಿ ಸೆಕ್ಷನ್ 417 ಅಡಿಯಲ್ಲಿ 1 ವರ್ಷ ಕಠಿಣ ಸಜೆ, ಸಾಕ್ಷ್ಯ ನಾಶಕ್ಕಾಗಿ ಸೆಕ್ಷನ್ 201ರ ಅಡಿಯಲ್ಲಿ 7 ವರ್ಷ ಕಠಿಣ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ಪಾವತಿಸಬೇಕು ಎಂದು ನ್ಯಾಯಾಧೀಶೆ ಸಯಿದುನ್ನೀಸಾ ತೀರ್ಪಿನಲ್ಲಿ ಆದೇಶಿಸಿದ್ದಾರೆ.
ಈ ಹಿಂದಿನ ಪ್ರಕರಣಗಳ ಶಿಕ್ಷೆ ಅನುಭವಿಸಿದ ಬಳಿಕ ಈ ಪ್ರಕರಣದ ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದ್ದು, ಶಿಕ್ಷೆ ಜತೆಗೆ 45 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…