ಮಂಗಳೂರು: ಸೈಬರ್ ವಂಚಕರನ್ನು ಬಂಧಿಸಿ ವಿಚಾರಣೆ ನಡೆಸಬೇಕಿದ್ದ ಪೊಲೀಸರು ಆರೋಪಿಗಳ ಜತೆಗೆ ಅವರ ದುಡ್ಡಿನಲ್ಲೇ ಪ್ರವಾಸ ಹೋಗಿದ್ದ ಆರೋಪದ ಬಗ್ಗೆ ಇದೀಗ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಎಸಿಪಿ ಸೆನ್ ರವೀಶ್ ನಾಯಕ್ ಅವರಿಗೆ ಪ್ರಾಥಮಿಕ ತನಿಖೆಯ ಜವಾಬ್ದಾರಿ ನೀಡಲಾಗಿದೆ. ಅವರು ತನಿಖೆ ಮಾಡಿ ಕೆಲ ದಾಖಲಾತಿ ಸಂಗ್ರಹ ಮಾಡಿದ್ದಾರೆ. ಫ್ಲೈಟ್ ಟಿಕೇಟ್ ಉರ್ವ ಠಾಣೆ ಇನ್ಸ್ ಪೆಕ್ಟರ್ ಹಣ ಕೊಟ್ಟು ಬುಕ್ ಮಾಡಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ತನಿಖೆ ಸಂದರ್ಭ ಹೆಡ್ ಪೊಲೀಸ್ ಕಾನ್ ಸ್ಟೇಬಲ್ ತಪ್ಪು ಮಾಡಿದ್ದಾರೆ. ಆರೋಪಿಯ ಜೊತೆ ಸೆಲ್ಫಿ ತೆಗೆದುಕೊಂಡಿದ್ದು, ಈ ಬಗ್ಗೆ ಈಗಾಗಲೇ ಕ್ರಮ ತೆಗೆದುಕೊಂಡಿದ್ದೇವೆ. ಹೆಡ್ ಪೊಲೀಸ್ ಕಾನ್ ಸ್ಟೇಬಲ್ ಅಮಾನತು ಮಾಡಿದ್ದೇವೆ.
ಠಾಣೆಯಲ್ಲಿ ತನಿಖೆ ಸಂದರ್ಭ ಕಾಲೇಜು ವಿದ್ಯಾರ್ಥಿಗಳ ತಂಡ ಬಂದಿದೆ. ಆ ವೇಳೆ ಇನ್ಸ್ ಪೆಕ್ಟರ್ ಸೈಬರ್ ಕ್ರೈಮ್ ಆರೋಪಿ ನಡೆಸಿದ ಕೃತ್ಯದ ಬಗ್ಗೆ ವಿದ್ಯಾರ್ಥಿಗಳ ಜೊತೆ ಹೇಳಿಕೊಂಡಿದ್ದಾರೆ. ಪೊಲೀಸ್ ಇಲಾಖೆ ನಿಯಮ ಪ್ರಕಾರ ಕ್ರಿಮಿನಲ್ಸ್ ಗಳನ್ನು ವಿದ್ಯಾರ್ಥಿಗಳ ಮುಂದೆ ಹಾಜರು ಮಾಡಬಾರದು. ಹೀಗಾಗಿ ಉರ್ವ ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಿದ್ದೇವೆ ಎಂದು ಅವರು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…