ಮಂಗಳೂರು: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯ ತೀರ್ಪು ನೀಡಿದ್ದರೂ ಕೆಲವರು ಧರ್ಮಸ್ಥಳ ಕ್ಷೇತ್ರ ಹಾಗೂ ಜೈನ ಸಮುದಾಯದ ವಿರುದ್ಧ ಆರೋಪ ಮಾಡುತ್ತಿರುವುದನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಸಿದ್ಧ ಧರ್ಮಸ್ಥಳ ಕ್ಷೇತ್ರದ ಪ್ರಮುಖರ ವಿರುದ್ಧ ಆರೋಪ ಮಾಡಿ, ಮುಗ್ಧ ಜನರನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿರುವ ವ್ಯಕ್ತಿಯೊಬ್ಬರು ಸಿಬಿಐ ತನಿಖೆ ನಡೆಸುವಾಗ, ಸಾಕ್ಷಿಯ ಹೇಳಿಕೆ ನೀಡಲು ಹಿಂದೇಟು ಹಾಕಿದರು. ಯಾರ ಮೇಲೆ ಆರೋಪ ಮಾಡಲಾಗಿತ್ತೋ ಅವರು ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಈಗ ರಾಷ್ಟ್ರದ ಅತ್ಯುನ್ನತ ತನಿಖಾ ಸಂಸ್ಥೆಯ ವಿರುದ್ಧ ಆರೋಪ ಮಾಡುತ್ತಿರುವುದು ಸರಿಯಲ್ಲ. ಆರೋಪ ಮಾಡುವ ವ್ಯಕ್ತಿಗೆ ನಿಜವಾದ ಕಾಳಜಿ ಇದ್ದರೆ, ನೈಜ ಆರೋಪಿಗಳ ಬಂಧನಕ್ಕೆ ಹಾಗೂ ಪೊಲೀಸ್ ತನಿಖೆಯ ವಿರುದ್ಧ ಧರಣಿ ನಡೆಸಲಿ’ ಎಂದರು.
ಬೆಳ್ತಂಗಡಿಯ ಧೀರಜ್ ಜೈನ್ ಮಾತನಾಡಿ, ‘ನಮ್ಮ ಮೇಲೆ ಆರೋಪ ಮಾಡಿದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಜತೆಗಿದ್ದವರಿಗೆ ಆರೋಪದ ಬಗ್ಗೆ ದೃಢತೆ ಇದ್ದರೆ, ತುಳುನಾಡಿನ ಆರಾಧ್ಯ ಕ್ಷೇತ್ರವಾದ ಕಾನತ್ತೂರು ದೈವ ಕ್ಷೇತ್ರಕ್ಕೆ 10 ದಿನಗಳೊಳಗೆ ಬಂದು ಪ್ರಮಾಣ ಮಾಡಲಿ. ನಾವು ದೈವದ ಸಮ್ಮುಖದಲ್ಲಿ ಪ್ರಮಾಣ ಮಾಡಲು ಸಿದ್ಧರಿದ್ದೇವೆ. ಹಿಂದೆಯೂ ಪ್ರಮಾಣಕ್ಕೆ ಕರೆದಾಗ ಅವರು ಬಂದಿರಲಿಲ್ಲ. ಈಗಲಾದರೂ ಕ್ಷೇತ್ರಕ್ಕೆ ಬಂದು ಪ್ರಮಾಣ ಮಾಡಲಿ’ ಎಂದು ಸವಾಲು ಹಾಕಿದರು.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…