ಮಂಗಳೂರು: ಹಲವು ಸಮಯದಿಂದ ಬಾಕಿ ಇರುವ ನಿಗಮ – ಮಂಡಳಿಗಳಿಗೆ ಶೀಘ್ರ ಅಧ್ಯಕ್ಷರ ನೇಮಕ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರಿಗೆ ಆದ್ಯತೆ ನೀಡಿ, ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಅವರು ಮಾತನಾಡಿದರು.
ಗೃಹ ಸಚಿವ ಜಿ. ಪರಮೇಶ್ವರ ಅವರು ಮನೆಗೆ ಊಟಕ್ಕೆ ಕರೆದಿದ್ದರು. ನಾನು ಮತ್ತು ಕೆಲವು ಸಚಿವರು ಹೋಗಿದ್ದೆವು. ಅಲ್ಲಿ ಯಾವುದೇ ರಾಜಕೀಯ ನಡೆದಿಲ್ಲ. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸೌಜನ್ಯ ಕೊಲೆ ಪ್ರಕರಣ ಬಗ್ಗೆ ಸಿಬಿಐ ತನಿಖೆ ನಡೆಸಿದೆ. ಹೀಗಾಗಿ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದರು.
ಸಿಎಂ ಅಂದ್ರೆ ಕಲೆಕ್ಷನ್ ಮಾಸ್ಟರ್ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ನಾನು 1983ರಲ್ಲಿ ಶಾಸಕನಾಗಿ, ನಂತರ ಸಚಿವ ನಾದವನು. ಹರೀಶ್ ಪೂಂಜ ಇನ್ನೂ ಬಚ್ಚಾ ಎಂದು ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…