ಮಂಗಳೂರು: ಸ್ಕೂಟರ್ ಗೆ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟು , ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಗರದ ಕೆಪಿಟಿ ಸರ್ಕಲ್ ನಲ್ಲಿ ನಡೆದಿದೆ.
ಮೃತಮಹಿಳೆಯನ್ನು ಗುರುಪುರ ನಿವಾಸಿ ಸುಜಾತ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಸವಾರನ ಗುರುತು ಪತ್ತೆಯಾಗಿಲ್ಲ.
ಎಜೆ ಆಸ್ಪತ್ರೆಯಿಂದ ಕೇರಳದ ಕಡೆ ಮೃತದೇಹವನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಕೆಪಿಟಿ ಸಿಗ್ನಲ್ ಬಳಿ ಬರುತ್ತಿದ್ದಂತೆ ಸ್ಕೂಟರ್ ಗೆ ಹಿಂಬಂದಿಯಿಂದ ಢಿಕ್ಕಿ ಹೊಡೆದಿದೆ. ಮಾತ್ರವಲ್ಲದೆ ಡಿಕ್ಕಿಯ ರಭಸಕ್ಕೆ ಸ್ಕೂಟರ್ ನ್ನು 50 ಮೀಟರ್ ನಷ್ಟು ಎಳೆದೊಯ್ಯಿದಿದೆ.
ಅಪಘಾತದ ಪರಿಣಾಮ ಸ್ಕೂಟರ್ ಸವಾರಿಬ್ಬರು ರಸ್ತೆಗೆ ಬಿದ್ದು ಗಂಭೀರ ಗಾಯಗಳಾಗಿದ್ದು, ಸಹ ಸವಾರೆ ಸುಜಾತ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕದ್ರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…