ಮಂಗಳೂರು: ಸ್ಕೂಟರ್ ಗೆ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟು , ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಗರದ ಕೆಪಿಟಿ ಸರ್ಕಲ್ ನಲ್ಲಿ ನಡೆದಿದೆ.
ಮೃತಮಹಿಳೆಯನ್ನು ಗುರುಪುರ ನಿವಾಸಿ ಸುಜಾತ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಸವಾರನ ಗುರುತು ಪತ್ತೆಯಾಗಿಲ್ಲ.
ಎಜೆ ಆಸ್ಪತ್ರೆಯಿಂದ ಕೇರಳದ ಕಡೆ ಮೃತದೇಹವನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಕೆಪಿಟಿ ಸಿಗ್ನಲ್ ಬಳಿ ಬರುತ್ತಿದ್ದಂತೆ ಸ್ಕೂಟರ್ ಗೆ ಹಿಂಬಂದಿಯಿಂದ ಢಿಕ್ಕಿ ಹೊಡೆದಿದೆ. ಮಾತ್ರವಲ್ಲದೆ ಡಿಕ್ಕಿಯ ರಭಸಕ್ಕೆ ಸ್ಕೂಟರ್ ನ್ನು 50 ಮೀಟರ್ ನಷ್ಟು ಎಳೆದೊಯ್ಯಿದಿದೆ.
ಅಪಘಾತದ ಪರಿಣಾಮ ಸ್ಕೂಟರ್ ಸವಾರಿಬ್ಬರು ರಸ್ತೆಗೆ ಬಿದ್ದು ಗಂಭೀರ ಗಾಯಗಳಾಗಿದ್ದು, ಸಹ ಸವಾರೆ ಸುಜಾತ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕದ್ರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾಂಗ್ಲಾದಲ್ಲಿ ನದಿಗೆ ಉರುಳಿದ ಬಸ್ : 23 ಜನ ಸಾವು, ಹಲವರು ನಾಪತ್ತೆ ಢಾಕಾ: ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ…
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಓರ್ವ ಆರೋಪಿಗೆ ಜಾಮೀನು ಸುಳ್ಯ: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ…
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…