Featured

ಮಂಗಳೂರು :  ಸ್ಥಳೀಯರ ವಿರೋಧಿ ನೀತಿಗಳಿಗೆ MRPL ನಾಯಕತ್ವ ; ತ‌ನ್ನ ತಪ್ಪುಗಳನ್ನು ಸರಿಪಡಿಸದಿದ್ದಲ್ಲಿ ಕಂಪನಿಯನ್ನು ಗಡಿಪಾರು ಮಾಡಬೇಕು : ಮುನೀರ್ ಕಾಟಿಪಳ್ಳ – Vishwanews24

ಮಂಗಳೂರು :  ಸ್ಥಳೀಯರ ವಿರೋಧಿ ನೀತಿಗಳಿಗೆ MRPL ನಾಯಕತ್ವ ; ತ‌ನ್ನ ತಪ್ಪುಗಳನ್ನು ಸರಿಪಡಿಸದಿದ್ದಲ್ಲಿ ಕಂಪನಿಯನ್ನು ಗಡಿಪಾರು ಮಾಡಬೇಕು : ಮುನೀರ್ ಕಾಟಿಪಳ್ಳ

ಮಂಗಳೂರು: ಉದ್ಯೋಗ ಸೃಷ್ಟಿಯ ಭರವಸೆ ನೀಡಿ ತುಳುನಾಡಿನ ಅಪಾರ ಜಮೀನು ಕಬಳಿಸಿರುವ ಬೃಹತ್ ಕೈಗಾರಿಕೆಗಳು ಪರಿಸರವನ್ನು ಎಗ್ಗಿಲ್ಲದೆ ನಾಶಪಡಿಸಿದೆ.‌

ನೆಲ ಜಲವನ್ನು ವಿಷಮಯಗೊಳಿಸಿದ್ದು ಸಾಲದು ಎಂಬಂತೆ ಕಂಪೆನಿಯ ಸುತ್ತಲ ರಸ್ತೆ, ಚರಂಡಿಗಳನ್ನು ಬಳಕೆಗೆ ಆಯೋಗ್ಯ ಮಾಡಿ ಬಿಟ್ಟಿವೆ. ಕೈಗಾರಿಕೆಗಳ ಇಂತಹ ಸ್ಥಳೀಯರ ವಿರೋಧಿ ನೀತಿಗಳಿಗೆ ಎಮ್ಆರ್ ಪಿಎಲ್ ನಾಯಕತ್ವ ನೀಡುತ್ತಿದೆ.

ಕಂಪೆನಿ ತ‌ನ್ನ ತಪ್ಪುಗಳನ್ನು ಸರಿಪಡಿಸದಿದ್ದಲ್ಲಿ ಎಮ್ಆರ್ ಪಿಎಲ್ ಅನ್ನು ಜಿಲ್ಲೆಯಿಂದಲೇ ಗಡಿಪಾರು ಮಾಡಬೇಕು ಎಂದು ಮುನೀರ್ ಕಾಟಿಪಳ್ಳ ಆಕ್ರೋಶ ವ್ಯಕ್ತ ಪಡಿಸಿದರು.

ಕೂಳೂರು ಜೋಕಟ್ಟೆ ಎಸ್ಇಝಡ್ ಸಂಪರ್ಕದ ಎಮ್ಆರ್ ಪಿಎಲ್ ಕಂಪೆನಿಯ ಸುಪರ್ದಿಯಲ್ಲಿರುವ ಕಾರಿಡಾರ್ ರಸ್ತೆಯ ಹೊಂಡ ಗುಂಡಿ ಮುಚ್ಚಲು, ಅವ್ಯವಸ್ಥೆ ಸರಿಪಡಿಸಲು ಒತ್ತಾಯಿಸಿ ರುಚಿಗೋಲ್ಡ್ ಕಂಪೆನಿ ಮುಂಭಾಗ “ನಾಗರಿಕ ಹೋರಾಟ ಸಮಿತಿ, ಜೋಕಟ್ಟೆ” ಹಮ್ಮಿಕೊಂಡಿದ್ದ ರಸ್ತೆ ತಡೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು‌.

ಕೂಳೂರು, ಎಸ್ಇಝಡ್ ರಸ್ತೆ ಈಗ ಎಮ್ಆರ್ ಪಿಎಲ್ ಅಧೀನದಲ್ಲಿ ಇದೆ. ಎಸ್ಇಝಡ್, ಅನಘ, ರುಚಿಗೋಲ್ಡ್, ಅದಾನಿ ವಿಲ್ಮಾ ಸಹಿತ ಹಲವು ಕೈಗಾರಿಕೆಗಳು ಈ ರಸ್ತೆಯನ್ನು ಬಳಸುತ್ತಿವೆ. ಆದರೆ ರಸ್ತೆ ಪೂರ್ತಿ ಹೊಂಡಮಯ ಆಗಿದ್ದರೂ ಕಂಪೆನಿಗಳಾಗಲಿ, ಜಿಲ್ಲಾಡಳಿತವಾಗಲಿ ಯಾವುದೆ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ‌.

ಇಲ್ಲಿಯ ಚರಂಡಿಗಳನ್ನು ಕಂಪೆನಿಗಳು ಅಕ್ರಮಿಸಿ ಮಣ್ಣು ತುಂಬಿಸಿದ್ದರೂ ಕೇಳುವವರಿಲ್ಲ. ಅದರಿಂದ ಕಂಪೆನಿಗಳ ಮಲಿನ ನೀರು ಆಳೆತ್ತರಕ್ಕೆ ನಿಂತು ರೋಗರೋಜಿನಗಳು ವ್ಯಾಪಕವಾಗಿ ಹರಡುತ್ತಿದೆ.

ಸಣ್ಣ ವಾಹನಗಳಲ್ಲಿ ಪ್ರಯಾಣಿಸುವ ಜನತೆ ರಸ್ತೆ ಹೊಂಡಕ್ಕೆ ಬಿದ್ದು ಕೈಕಾಲು ಮುರಿಸಿಕೊಳ್ಳುತ್ತಿದ್ದಾರೆ. ಹೊಂಡ ಗುಂಡಿ ಮುಚ್ಚಲು ಜಿಲ್ಲಾಡಳಿತ ತಕ್ಷಣ ಸರಿಯಾದ ಕ್ರಮ ಕೈಗೊಳ್ಳದಿದ್ದಲ್ಲಿ ಸ್ಥಳೀಯ ಕಂಪೆನಿಗಳಿಗೆ ಘೆರಾವ್ ಮಾಡುವುದಾಗಿ ಎಚ್ಚರಿಸಿದರು.

ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಬಿ ಎಸ್ ಬಶೀರ್, ತೋಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೆವಿನ್, ಹೋರಾಟ ಸಮಿತಿಯ ಸಂಚಾಲಕ, ಗ್ರಾಮ ಪಂಚಾಯತ್ ಸದಸ್ಯರಾದ ಅಬೂಬಕ್ಕರ್ ಬಾವ,

ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರೆಸಿಲ್ಲಾ ಮೊಂತೆರೊ, ಮಾಜಿ ಉಪಾಧ್ಯಕ್ಷ ಸಂಸು ಇದ್ದಿನಬ್ಬ, ಹೋರಾಟ ಸಮಿತಿಯ ಪ್ರಮುಖರಾದ ಹನೀಫ್ ಜೋಕಟ್ಟೆ,

ಲಾನ್ಸಿ ಜೋಕಟ್ಟೆ, ಫಾರೂಕ್ ಕೆ ಬಿ ಎಸ್, ಇಕ್ಬಾಲ್ ಜೋಕಟ್ಟೆ, ಹಮೀದ್, ಶಂಸುದ್ದಿನ್ ಅರಿಕೆರೆ, ಇಸ್ಮಾಯಿಲ್ ಅಜಾದ್ ಮತ್ತಿತರರು ನಾಯಕತ್ವ ವಹಿಸಿದ್ದರು.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

21 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

21 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

21 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

22 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

22 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

22 hours ago