ಮಂಗಳೂರು: ನಗರದ ಖಾಸಗಿ ಕಾಲೇಜಿನಲ್ಲಿ ಬಿ.ಎ ವ್ಯಾಸಂಗ ಮಾಡುತ್ತಿದ್ದ ವರ್ಷಿತಾ ಫ್ಲೋರಾ (19) ನಾಪತ್ತೆಯಾಗಿದ್ದಾರೆ.
ಮೂಲತಃ ಮೈಸೂರಿನವರಾಗಿದ್ದು ಕಳೆದ 15 ವರ್ಷಗಳಿಂದ ಮಂಗಳೂರಿನಲ್ಲಿ ವಾಸವಾಗಿದ್ದ ಇವರು ಫೆ. 16ರಂದು ಬೆಳಗ್ಗೆ 7ಕ್ಕೆ ಕಾಲೇಜಿಗೆ ಸ್ಪೋರ್ಟ್ಸ್ ಡೇ ಎಂದು ಹೇಳಿ ಹೋಗಿದ್ದರು. ಅಪರಾಹ್ನ 3.30ಕ್ಕೆ ತಾಯಿಗೆ ಕರೆ ಮಾಡಿ ಮನೆಗೆ ಬರುವುದಿಲ್ಲ ಎಂದು ಹೇಳಿದ್ದಾರೆ. ಅನಂತರ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಕಂಕನಾಡಿ ನಗರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.
ಬಿಳಿ ಮೈಬಣ್ಣ, 5.4 ಅಡಿ ಎತ್ತರ, ದುಂಡು ಮುಖ, ಸಾಧಾರಣ ಶರೀರ, ಉದ್ದ ಕಪ್ಪು ತಲೆಕೂದಲು ಹೊಂದಿದ್ದು ಕಪ್ಪು ಬಣ್ಣದ ಪ್ಯಾಂಟ್, ಬಳಿ ಮತ್ತು ಕಂದು ಬಣ್ಣದ ಗೆರೆಗಳಿರುವ ಟೀ ಶರ್ಟ್ ಧರಿಸಿದ್ದರು. ಕನ್ನಡ, ಇಂಗ್ಲಿಷ್, ಹಿಂದಿ, ಕೊಂಕಣಿ ಭಾಷೆ ಮಾತನಾಡುತ್ತಾರೆ. ಮಾಹಿತಿ ದೊರೆತವರು ಕಂಕನಾಡಿ ನಗರ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…